ಮೈಸೂರು, ಮಾ.3:ಮೈಸೂರಿನ ಕೃಷ್ಣರಾಜ ಕ್ಷೇತ್ರ ಬಿಜೆಪಿ ಕಾರ್ಯಕರ್ತರ ಭದ್ರಕೋಟೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದರು.
ಕೆ.ಅರ್.ಕ್ಷೇತ್ರದ ಬಿಜೆಪಿ ನೂತನ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು,ನಗರದಲ್ಲಿ ಅತಿ ಹೆಚ್ಚು ಕಾರ್ಯಕರ್ತರು ಇರುವ ಕ್ಷೇತ್ರ ಕೃಷ್ಣ ರಾಜ ಕ್ಷೇತ್ರ,ಹಾಗಾಗಿ ಕಾರ್ಯಕರ್ತರು ಲೋಕಸಭಾ ಚುನಾವಣೆಗೆ ಈಗಿನಿಂದಲೇ ಸಜ್ಜಾಗಬೇಕು ಎಂದು ಹೇಳಿದರು.
ಅತಿ ಹೆಚ್ಚು ಮತದಾನ ನಡೆಯುವ ಕ್ಷೇತ್ರ ಕೃಷ್ಣರಾಜ, ಇಂತಹ ಕ್ಷೇತ್ರದಲ್ಲಿ ಅಧ್ಯಕ್ಷರಾಗುವುದು ಹೆಮ್ಮೆಯ ವಿಚಾರ,ನೂತನ ಅಧ್ಯಕ್ಷರು ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕೆಂದು ಸಲಹೆ ನೀಡಿದರು.
ಚಾಮುಂಡಿ ಪುರಂನ ಶಾರದ ಅನಿಕೇತನ ಸಭಾಂಗಣದಲ್ಲಿ ಅಧಿಕೃತವಾಗಿ ಬಾ.ಜ.ಪ.ಧ್ವಜ ಹಸ್ತಾಂತರಿಸುವ ಮೂಲಕ ಗೋಪಾಲ್ ರಾಜ್ ಅರಸ್ ಅವರು ಅಧಿಕಾರ ಸ್ವೀಕರಿಸಿದರು.
ಸಂಸದರಾದ ಪ್ರತಾಪ್ ಸಿಂಹ,ಶಾಸಕರಾದ ಟಿ.ಎಸ್.ಶ್ರೀ ವತ್ಸ,ನಗರ ಅಧ್ಯಕ್ಷ ಎಲ್.ನಾಗೇಂದ್ರ ಮಾಜಿ ಅಧ್ಯಕ್ಷ ರಾದ ವಡಿವೇಲು,ಮೈ. ವಿ.ರವಿಶಂಕರ್, ಗಿರೀಧರ್ ಅವರ ಸಮ್ಮುಖದಲ್ಲಿ ಅಧಿಕಾರ ಸ್ವೀಕರಿಸಿದರು.
ಕೆ.ಅರ್.ಕ್ಷೇತ್ರದ ಶಾಸಕ ಟಿ.ಎಸ್.ಶ್ರೀ ವತ್ಸ ಮಾತನಾಡಿ ಪ್ರತಿ ಮೂರು ವರ್ಷಕೊಮ್ಮೆ ಜವಾಬ್ದಾರಿ ಹಸ್ತಾಂತರ ಮಾಡುವುದು ಪಕ್ಷದ ನಿಯಮ,ಕಳೆದ ಹತ್ತಾರು ವರ್ಷಗಳಿಂದ ಪಕ್ಷದ ಸಂಘಟನೆ ಯಲ್ಲಿ ಇರುವ ಸಾಮಾನ್ಯ ಕಾರ್ಯಕರ್ತ ಇವರ ನಾಯಕತ್ವದಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅತಿಹೆಚ್ಚು ಮತದಾನ ಮಾಡಿಸುವ ಮೂಲಕ ರಾಜ್ಯಕ್ಕೆ ಮಾದರಿ ಕ್ಷೇತ್ರ ವನ್ನಾಗಿ ಮಾಡಬೇಕು ಎಂದು ಕಿವಿ ಮಾತು ತಿಳಿಸಿದರು.
ಕ್ಷೇತ್ರದಲ್ಲಿ ಯಾವುದೇ ಗುಂಪುಗಾರಿಕೆ ನಡೆಯುವುದಿಲ್ಲ ಇಲ್ಲಿರುವುದು ಒಂದೆ ನಾವೆಲ್ಲರೂ ಕಮಲದ ಅಡಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ಕಾರ್ಯಕರ್ತರಿಗೆ ತಿಳಿಸಿದರು.
ಮಾಜಿ ಉಪಮೇಯರ್ ಡಾ.ರೂಪ,ಪ್ರಧಾನ ಕಾರ್ಯದರ್ಶಿ ಗಳಾದ ಗಿರಿಧರ್,ರಘು ಬಿ.ಎಂ.ನಗರ ಉಪಾಧ್ಯಕ್ಷರಾದ ಜೋಗಿ ಮಂಜು, ವಿಶ್ವೇಶ್ವರಯ್ಯ,ಕ್ಷೇತ್ರದ ಅಧ್ಯಕ್ಷ ಗೋಪಾಲ ರಾಜ ಅರಸ್,ಮಾಜಿ ಅಧ್ಯಕ್ಷ ವಡಿವೇಲು, ಯುವ ಮೊರ್ಚಾ ಅಧ್ಯಕ್ಷ ರಾಕೇಶ್ ಗೌಡ,ಚಾಮರಾಜ ಕ್ಷೇತ್ರದ ಅಧ್ಯಕ್ಷ ದಿನೇಶ್ ಗೌಡ,ಪ್ರಧಾನ ಕಾರ್ಯದರ್ಶಿ ಜಯರಾಮ್ ಮತ್ತಿತರರು ಹಾಜರಿದ್ದರು.