ಬೆಂಗಳೂರು : ವಿಶಾಖಪಟ್ಟಣಂ ವೈಜಾಗ್‌ನ ಡಾ. ವೈಎಸ್ ರಾಜಶೇಖರ ರೆಡ್ಡಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಭಾರತದ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ತಂಡದಲ್ಲಿ ಎರಡು ಪ್ರಮುಖ ಬದಲಾವಣೆ ಮಾಡಲಾಗಿದೆ. ಕೆ.ಎಲ್. ರಾಹುಲ್ ಹಾಗೂ ರವೀಂದ್ರ ಜಡೇಜಾ ಸ್ಥಾನಕ್ಕೆ ಹೊಸ ಆಟಗಾರರ ಎಂಟ್ರಿ ಆಗಿದೆ. ಮೊಹಮ್ಮದ್ ಸಿರಾಜ್ಗೆ ವಿಶ್ರಾಂತಿ ನೀಡಲಾಗಿದೆ. ಮೂರನೇ ಸ್ಪಿನ್ನರ್ ಆಗಿ ಕುಲ್ದೀಪ್ ಯಾದವ್ ಸ್ಥಾನ ಪಡೆದುಕೊಂಡಿದ್ದಾರೆ. ಇದೆ ಪಂದ್ಯದಲ್ಲಿ ರಜತ್ ಪಟಿದಾರ್ ಅಂತರರಾಷ್ಟ್ರೀಯ ಟೆಸ್ಟ್ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ್ದಾರೆ.
5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಈಗಾಗಲೇ ಆಂಗ್ಲರು ಮೊದಲ ಪಂದ್ಯ ಗೆದ್ದು 1-0 ಮುನ್ನಡೆಯಲ್ಲಿದ್ದರೆ, ಎರಡನೇ ಟೆಸ್ಟ್ ಗೆದ್ದು ಭಾರತ ಕಮ್ಬ್ಯಾಕ್ ಮಾಡುವ ಪ್ಲಾನ್ ಮಾಡಿದೆ.
ಭಾರತ ತಂಡ :
ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ಶ್ರೇಯಸ್ ಅಯ್ಯರ್, ರಜತ್ ಪಟಿದಾರ್, ಕೆ.ಎಸ್ ಭರತ್ (ವಿ.ಕೀ.), ಅಕ್ಸರ್ ಪಟೇಲ್, ರವಿಚಂದ್ರನ್ ಅಶ್ವಿನ್, ಕುಲ್ದೀಪ್ ಯಾದವ್, ಜಸ್ಪ್ರಿತ್ ಬುಮ್ರಾ, ಮುಖೇಶ್ ಕುಮಾರ್
ಇಂಗ್ಲೆಂಡ್ ತಂಡ :
ಬೆನ್ ಸ್ಟೋಕ್ಸ್ (ನಾಯಕ), ಝಾಕ್ ಕ್ರಾಲಿ, ಬೆನ್ ಡಕೆಟ್, ಒಲ್ಲಿ ಪೋಪ್, ಜೋ ರೂಟ್, ಜಾನಿ ಬೈರ್‌ಸ್ಟೋವ್, ಬೆನ್ ಫೋಕ್ಸ್ (ವಿ.ಕೀ.), ರೆಹಾನ್ ಅಹ್ಮದ್, ಟಾಮ್ ಹಾರ್ಟ್ಲಿ, ಶೊಯೆಬ್ ಬಶೀರ್, ಜೇಮ್ಸ್ ಆಂಡರ್ಸನ್
ಊಟಕ್ಕೆ ಹಾಕದ ತಾಯಿಯನ್ನೇ ಹೊಡೆದು ಕೊಂದ ಮಗ