Tue. Nov 5th, 2024

ಬಿಜೆಪಿ, ಜೆಡಿಎಸ್‌ನಿಂದ ಕುರುಬ ಸಮುದಾಯಕ್ಕೆ ಅನ್ಯಾಯ: ಬಸವರಾಜ್ ಬಸಪ್ಪ

Share this with Friends

ಮೈಸೂರು,ಏ.25: ಬಿಜೆಪಿ, ಜೆಡಿಎಸ್‌ನಿಂದ ಕುರುಬ ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ಕೆ ಆರ್ ಬ್ಯಾಂಕ್ ಉಪಾಧ್ಯಕ್ಷ ಬಸವರಾಜ್ ಬಸಪ್ಪ ಆರೋಪಿಸಿದ್ದಾರೆ

ರಾಜ್ಯದ ಜನಸಂಖ್ಯೆಯಲ್ಲಿ 3ನೇ ಸ್ಥಾನದಲ್ಲಿರುವ ಕುರುಬ ಸಮಾಜ 65-70 ಲಕ್ಷ ಜನಸಂಖ್ಯೆಯನ್ನು ಹೊಂದಿದೆ. ಸಾಮಾಜಿಕ ನ್ಯಾಯದಂತೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಸಮುದಾಯದವರಿಗೆ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ 2 ಟಿಕೆಟ್ ನೀಡಬೇಕಿತ್ತು. ಆದರೆ, ಒಬ್ಬರಿಗೂ ಟಿಕೆಟ್ ನೀಡಿಲ್ಲ ಎಂದು ಹೇಳಿದ್ದಾರೆ.

ಟಿಕೆಟ್ ಹಂಚಿಕೆಯಲ್ಲಿ ಸಮುದಾಯಕ್ಕೆ ಅನ್ಯಾಯವೆಸಗಿರುವ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳಿಗೆ ರಾಜ್ಯದ ಸಮಸ್ತ ಕುರುಬ ಸಮುದಾಯದ ಮತದಾರರು ಬುದ್ಧಿ ಕಲಿಸಬೇಕು ಎಂದು ಸಲಹೆ ನೀಡಿದ್ದಾರೆ

ಸೈಕಲ್ ತುಳಿದು ಬಿಜೆಪಿ ಪಕ್ಷ ಕಟ್ಟಿ ಬೆಳೆಸುವಲ್ಲಿ ಕುರುಬ ಸಮುದಾಯದ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ಅವರ ಶ್ರಮ ಬಹಳಷ್ಟಿದೆ. ಇಂತಹ ದೊಡ್ಡ ನಾಯಕನನ್ನು ರಾಜಕೀಯವಾಗಿ ಮೂಲೆಗುಂಪು ಮಾಡಲಾಗುತ್ತಿದೆ,ಅವರ ಸೇವೆಯನ್ನು ಗುರುತಿಸಿ, ಮಗನಿಗೆ ಟಿಕೆಟ್ ನೀಡಬೇಕಿತ್ತು,ಇದನ್ನು ವಿರೋಧಿಸಿದ್ದಕ್ಕೆ ಪಕ್ಷದಿಂದಲೇ ಅವರನ್ನು ಉಚ್ಛಾಟನೆ ಮಾಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‌ಕಾಂಗ್ರೆಸ್ ಪಕ್ಷ ಸಾಮಾಜಿಕ ನ್ಯಾಯದ ಅಡಿಯಲ್ಲಿ ಕುರುಬ ಸಮುದಾಯಕ್ಕೆ ಧಾರವಾಡ ಮತ್ತು ಕೊಪ್ಪಳ ಲೋಕಸಭಾ ಕ್ಷೇತ್ರಗಳಲ್ಲಿ ಟಿಕೆಟ್ ನೀಡಿದೆ. ಕುರುಬ ಸಮುದಾಯದ ಜೊತೆಗೆ ಇನ್ನಿತರ ಎಲ್ಲ ಸಮುದಾಯಗಳನ್ನು ಒಟ್ಟೊಟ್ಟಿಗೆ ತೆಗೆದುಕೊಂಡು ಹೋಗುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೈ ಬಲಪಡಿಸಬೇಕು ಎಂದು ಬಸವರಾಜ್ ಬಸಪ್ಪ ಮನವಿ ಮಾಡಿದ್ದಾರೆ.

ಮೈಸೂರು ಕೊಡಗು ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಎಂ ಲಕ್ಷ್ಮಣ್ ಗೆಲ್ಲುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.


Share this with Friends

Related Post