Sun. Apr 20th, 2025

ಅಂತರಾಷ್ಟ್ರೀಯ ಪ್ಲಾಸ್ಟಿಕ್ ಚೀಲ ಮುಕ್ತ ದಿನ:ನಾಳೆ ಜಾಗೃತಿ ಕಾರ್ಯಕ್ರಮ

Share this with Friends

ಮೈಸೂರು,ಜುಲೈ.1: ಕೆ ಎಮ್ ಪಿ ಕೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಅಂತರಾಷ್ಟ್ರೀಯ ಪ್ಲಾಸ್ಟಿಕ್ ಚೀಲ ಮುಕ್ತ ದಿನ ಅಂಗವಾಗಿ ನಾಳೆ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಮನೆ ಮನೆಗೆ ತೆರಳಿ ಬಟ್ಟೆ ಬ್ಯಾಗ್ ವಿತರಿಸಿ ಪ್ಲಾಸ್ಟಿಕ್ ಬ್ಯಾಗ್ ತ್ಯಜಿಸಿ ಬಟ್ಟೆ ಬ್ಯಾಗ್ ಬಳಸಿ ಜಾಗೃತಿ ಕಾರ್ಯಕ್ರಮವನ್ನು ಚಾಮುಂಡಿಪುರ ವೃತ್ತದಲ್ಲಿ ಮಂಗಳವಾರ ಬೆಳಗ್ಗೆ 10 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಕೆಎಂಪಿ ಕೆ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್ ತಿಳಿಸಿದ್ದಾರೆ.

ಪಾಲಿಕೆ ಆಯುಕ್ತ
ಆಶಾದ್ ಉರ್ ರಹಮಾನ್ ಶರೀಫ್,ಸಹಾಯಕ ಆಯುಕ್ತ ಮಂಜುನಾಥ್ ರೆಡ್ಡಿ, ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್,ಹಿರಿಯ ಆರೋಗ್ಯ ನಿರೀಕ್ಷಕ ಶಿವಪ್ರಸಾದ್ ಮತ್ತಿತರರು ಪಾಲ್ಗೊಳ್ಳುವರು.


Share this with Friends

Related Post