ಮೈಸೂರು, ಮೇ.17: ಸಾರ್ವಜನಿಕರ ಅನುಕೂಲಕ್ಕಾಗಿ ದಿನೇಶ್ ಗುಂಡೂರಾವ್ ಅಭಿಮಾನಿ ಬಳಗ ಜನ ಸೇವಾ ಕೇಂದ್ರ ಪ್ರಾರಂಭಿಸಿದೆ.
ನಗರದ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿ ದಿನೇಶ್ ಗುಂಡೂರಾವ್ ಅಭಿಮಾನಿ ಬಳಗದ ವತಿಯಿಂದ ಸಾರ್ವಜನಿಕರ ಅನುಕೂಲಕ್ಕಾಗಿ ಹಾಗೂ ವೃದ್ಧರಿಗೆ ಉಚಿತ ಸರ್ಕಾರದ ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ಜನ ಸೇವಾ ಕೇಂದ್ರವನ್ನು ಪ್ರಾರಂಭಿಸಲಾಗಿದೆ.
ಮಾಜಿ ಶಾಸಕ ಎಂ. ಕೆ ಸೋಮಶೇಖರ್ ಈ ಕೇಂದ್ರವನ್ನು ಉದ್ಘಾಟಿಸಿದರು.ಈ ವೇಳೆ ಮಾತನಾಡಿದ ಅವರು, ಇಂದಿನ ತಾಂತ್ರಿಕ ಯುಗದಲ್ಲಿ ಅನ್ಲೈನ್ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಸರ್ಕಾರದ ಸವಲತ್ತು ತಲುಪಲು ಸಾರ್ವಜನಿಕ ಸೇವಾಕೇಂದ್ರಗಳು ಸೇತುವೆಯಾಗಿ ಕೆಲಸ ಮಾಡುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.
ರಾಜ್ಯ ಸರ್ಕಾರದ ಪಂಚಗ್ಯಾರೆಂಟಿಗಳ ಭಾಗ್ಯಗಳು ನೇರವಾಗಿ ಕರ್ನಾಟಕದ ಮನೆಮನಗಳಿಗೆ ತಲುಪಿದೆ, ಜನತೆಯನ್ನ ಹಸಿವು ಮುಕ್ತಗೊಳಿಸಿ ಬೆಳಕನ್ನು ನೀಡುವ ಮೂಲಕ ಪ್ರತಿಮನೆಯ ತಾಯಿ ಯಜಮಾನಿಗೆ ಪ್ರೋತ್ಸಾಹವನ್ನ ನೀಡಿ ಯುವಪದವೀಧರರನ್ನ ರಕ್ಷಿಸುವಲ್ಲಿ ಸಿದ್ಧರಾಮಯ್ಯ ಸರ್ಕಾರ ಯಶಸ್ಸು ಕಂಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ದಿನೇಶ್ ಗುಂಡೂರಾವ್ ಅಭಿಮಾನಿ ಬಳಗದ ಅಧ್ಯಕ್ಷ ವಿನಯ್ ಕಣಗಾಲ್ ಮಾತನಾಡಿ,ಸಾರ್ವಜನಿಕರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸವಲತ್ತುಗಳನ್ನು ತಲುಪಿಸುವ ನಿಟ್ಟಿನಲ್ಲಿ ಸೇವಾ ಕೇಂದ್ರ ತೆರೆದಿದ್ದು, ಸಾರ್ವಜನಿಕರು ಇದನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಮನವಿ ಮಾಡಿದರು,
ವಿಶೇಷವಾಗಿ ಹಿರಿಯ ನಾಗರಿಕರಿಗೆ ಉಚಿತ ಸೇವೆಯನ್ನು ಈ ಸೇವ ಕೇಂದ್ರದಲ್ಲಿ ಒದಗಿಸಲಾಗುವುದು ಹೆಚ್ಚಿನ ಮಾಹಿತಿಗಾಗಿ 99726 06425 ಕರೆ ಮಾಡಿ ಮಾಹಿತಿ ಪಡೆಯಬಹುದು ಎಂದು ಹೇಳಿದರು
ಕೆಪಿಸಿಸಿ ಸದಸ್ಯರಾದ ನಜರ್ಬಾದ್ ನಟರಾಜ್, ಕೆಪಿಸಿಸಿ ಕಾರ್ಯದರ್ಶಿ ವೀಣಾ,ಕಾಂಗ್ರೆಸ್ ನಗರ ಮಾಜಿ ಅಧ್ಯಕ್ಷರಾದ ಟಿ ಎಸ್ ರವಿಶಂಕರ್, ಡಾ. ಸುಜಾತಾ ರಾವ್,
ವಿನಯ್ ಕುಮಾರ್, ಯತೀಂದ್ರ ಯುವ ಬ್ರಿಗೇಡ್ ಅಧ್ಯಕ್ಷ ಶಿವಕುಮಾರ್, ಎಸ್ ಎನ್ ರಾಜೇಶ್, ರಾಕೇಶ್, ರವಿಚಂದ್ರನ್, ಹೊಯ್ಸಳ ಕರ್ನಾಟಕದ ನಿರ್ದೇಶಕ ಜಯಸಿಂಹ, ರಂಗನಾಥ್, ವಿಜಯ್ ಕುಮಾರ್, ರಾಮಚಂದ್ರು ಮತ್ತಿತರರು ಹಾಜರಿದ್ದರು.