Fri. Nov 1st, 2024

ಜನಸ್ಪಂದನ ಕುಸಿದಿರುವ ಆಡಳಿತ ಯಂತ್ರದ ಪ್ರತಿಫಲನ:ಆರ್.ಅಶೋಕ್ ಟೀಕೆ

Share this with Friends

ಜನಸ್ಪಂದನ ಕುಸಿದಿರುವ ಆಡಳಿತ ಯಂತ್ರದ ಪ್ರತಿಫಲನ:ಆರ್.ಅಶೋಕ್ ಟೀಕೆ

ಬೆಂಗಳೂರು, ಫೆ.8: ಸಿಎಂ ಸಿದ್ದರಾಮಯ್ಯ ಅವರು ಹಮ್ಮಿಕೊಂಡಿದ್ದ ಜನಸ್ಪಂದನ ಕಾರ್ಯಕ್ರಮವನ್ನು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.

ವಿಧಾನಸೌಧದ ಮುಂದೆ ನಡೆಯುತ್ತಿರುವ ರಾಜ್ಯಮಟ್ಟದ ಜನಸ್ಪಂದನ ಕಾರ್ಯಕ್ರಮ ಅದೇನೋ ಮಹಾ ದೊಡ್ಡ ಸಾಧನೆ ಅಂತ ಮೆರೆಯುತ್ತಿದ್ದೀರಲ್ಲ ಸಿಎಂ ಸಿದ್ದರಾಮಯ್ಯ ನವರೇ, ಅಸಲಿಗೆ ಅದು ರಾಜ್ಯದಲ್ಲಿ ಸಂಪೂರ್ಣವಾಗಿ ಕುಸಿದಿರುವ ನಿಮ್ಮ ಆಡಳಿತ ಯಂತ್ರಕ್ಕೆ ಜೀವಂತ ನಿದರ್ಶನ ಎಂದು ಜರಿದಿದ್ದಾರೆ.

ರಾಜ್ಯದಲ್ಲಿ 34 ಸಂಪುಟ ಸಚಿವರಿದ್ದಾರೆ. ಪ್ರತೀ ಜಿಲ್ಲೆಗೆ ಒಬ್ಬ ಉಸ್ತುವಾರಿ ಸಚಿವರಿದ್ದಾರೆ. ಸಂಪುಟ ದರ್ಜೆ ಸ್ಥಾನಮಾನದ 34 ನಿಗಮ ಮಂಡಳಿಗಳ ಅಧ್ಯಕ್ಷರಿದ್ದಾರೆ.

ಜಿಲ್ಲಾಧಿಕಾರಿಗಳು, ಜಿ.ಪಂ. ಸಿಇಒಗಳು ಇದ್ದಾರೆ. ವಿಕೇಂದ್ರೀಕೃತ ಆಡಳಿತ ವ್ಯವಸ್ಥೆಯಲ್ಲಿ ಜಿಲ್ಲಾ, ತಾಲ್ಲೂಕು ಮಟ್ಟದಲ್ಲಿ ಪಂಚಾಯಿತಿಗಳೂ ಇವೆ.

ಇಷ್ಟೆಲ್ಲಾ ವ್ಯವಸ್ಥೆ ಇದ್ದರೂ ಒಬ್ಬ ಬಡ ವ್ಯಕ್ತಿ ತನ್ನ ಸಮಸ್ಯೆ ಬಗೆಹರಿಸಿಕೊಳ್ಳಲು ದೂರದ ಊರುಗಳಿಂದ ಬಸ್ಸು, ರೈಲು ಚಾರ್ಜು ಕೊಟ್ಟು ಅರ್ಜಿ ಹಿಡಿದುಕೊಂಡು ವಿಧಾನಸೌಧಕ್ಕೆ ಬಂದು ದಿನವೆಲ್ಲಾ ಕಾದು ಸಿಎಂ ಮುಂದೆ ಕೈಚಾಚಬೇಕಾದ ಪರಿಸ್ಥಿತಿ ಇದೆ ಎಂದರೆ ಅದು ನಿಮ್ಮ ಸರ್ಕಾರದ ಕಾರ್ಯವೈಖರಿಗೆ ಹಿಡಿದ ಕೈಗನ್ನಡಿ ಎಂದು ಟ್ವೀಟ್ ಮಾಡಿ ಟೀಕಿಸಿದ್ದಾರೆ.

ಅರ್ಜಿ ಹಿಡಿದು ಕೈಚಾಚುವ ಜನರ ಗೋಳನ್ನು ನಿಮ್ಮ ಬಿಟ್ಟಿ ಪ್ರಚಾರದ ಗೀಳಿಗೆ ಬಳಸಿಕೊಳ್ಳುತ್ತಿದ್ದೀರಲ್ಲ ಸಿದ್ದರಾಮಯ್ಯ ನವರೇ, ನಿಮಗೆ ನಿಜಕ್ಕೂ ನಾಚಿಕೆಯಾಗಬೇಕು ಎಂದು ಕಟುವಾಗಿ ಚಾಟಿ ಬೀಸಿದ್ದಾರೆ.

ಜನಸ್ಪಂದನ ಅಂತ ಪ್ರಚಾರಕ್ಕಾಗಿ ನಾಟಕ ಆಡುವ ಬದಲು ಮುಖ್ಯಮಂತ್ರಿಗಳು ತಮ್ಮ ಉಸ್ತುವಾರಿ ಮಂತ್ರಿಗಳಿಗೆ ಆಯಾ ಜಿಲ್ಲಾ ಕೇಂದ್ರಗಳಿಗೆ, ತಾಲ್ಲೂಕು ಕೇಂದ್ರಗಳಿಗೆ ಹೋಗಿ ಜನರ ಸಮಸ್ಯೆ ಆಲಿಸುವಂತೆ ಸೂಚನೆ ನೀಡಬೇಕು ಎಂದು ಅಶೋಕ್ ಸಲಹೆ ನೀಡಿದ್ದಾರೆ.

ಶಾಸಕರು ಜಿಲ್ಲಾಧಿಕಾರಿಗಳು, ಜಿ.ಪಂ. ಸಿಇಒ ಸಮ್ಮುಖದಲ್ಲಿ ಸ್ಥಳೀಯ ಮಟ್ಟದಲ್ಲೇ ಜನತಾ ದರ್ಶನ ನಡೆಸಿ ಅಲ್ಲೇ ಜನರ ಸಮಸ್ಯೆಗೆ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.


Share this with Friends

Related Post