ಬೆಂಗಳೂರು:ರಾಜ್ಯದ ಪ್ರಮುಖ ಪ್ರಾದೇಶಿಕ ಪಕ್ಷವಾಗಿರುವ ಜೆಡಿಎಸ್ ನೆರೆಯ ಮಹಾರಾಷ್ಟ್ರದಲ್ಲಿಯೂ ಅಸ್ತಿತ್ವ ಕಂಡುಕೊಳ್ಳುತ್ತಿದ್ದು,ನಗರ ಪಂಚಾಯತ್ ಮತ್ತು ಮುನ್ಸಿಪಲ್ ಕೌನ್ಸಿಲ್ ಚುನಾವಣೆಗಳಲ್ಲಿ ಕೌನ್ಸಿಲರ್ ಆಗಿ ಪಕ್ಷದ ಐವರು ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ.
ಮಹಾರಾಷ್ಟ್ರದಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡ ಸಂತಸ ವ್ಯಕ್ತಪಡಿಸಿದ್ದಾರೆ. ಮಹಾರಾಷ್ಟ್ರದಲ್ಲಿ ನಡೆದ ನಗರ ಪಂಚಾಯತ್ ಮತ್ತು ಮುನ್ಸಿಪಲ್ ಕೌನ್ಸಿಲ್ ಚುನಾವಣೆಗಳಲ್ಲಿ ಕೌನ್ಸಿಲರ್ ಆಗಿ ಆಯ್ಕೆಯಾಗಿರುವ ಪಕ್ಷದ ಐವರು ಅಭ್ಯರ್ಥಿಗಳಿಗೆ ಹೃತ್ಪೂರ್ವಕ ಅಭಿನಂದನೆಗಳು ಎಂದು ದೇವೇಗೌಡರು ಸಂದೇಶ ಕಳುಹಿಸಿದ್ದಾರೆ.
ಮಹಾರಾಷ್ಟ್ರ ರಾಜ್ಯದಲ್ಲಿ ನಮ್ಮ ಪಕ್ಷವನ್ನು ಬಲಪಡಿಸುವಲ್ಲಿ ಶ್ರಮಿಸುತ್ತಿರುವ ಪಕ್ಷದ ಮುಖಂಡರು , ಕಾರ್ಯಕರ್ತರಿಗೆ ಹಾಗೂ ನಮ್ಮ ಅಭ್ಯರ್ಥಿಗಳಿಗೆ ಮತನೀಡಿದ ಜಯಶೀಲರನ್ನಾಗಿಸಿದ ಪ್ರತಿಯೊಬ್ಬ ಮತದಾರರಿಗೂ ಧನ್ಯವಾದಗಳು. ಮುಂಬರುವ ಬೃಹನ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆ -2026 ರಲ್ಲಿ ಮತ್ತು ಭವಿಷ್ಯದ ಎಲ್ಲಾ ಚುನಾವಣೆಗಳಲ್ಲಿಯೂ ಹೆಚ್ಚು ಸ್ಥಾನಗಳನ್ನು ಪಡೆಯಲು ಈ ಗೆಲುವು ಮುನ್ನುಡಿಯಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

