ಮಂಗಳೂರು, ಫೆ. 07. ಫೆಬ್ರವರಿ 26 ಮತ್ತು 27ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
ಬೃಹತ್ ಉದ್ಯೋಗ ಮೇಳಕ್ಕೆ ರಾಜ್ಯದ ಎಲ್ಲಾ ವಲಯಗಳಿಂದಲೂ 500ಕ್ಕೂ ಹೆಚ್ಚಿನ ಪ್ರತಿಷ್ಠಿತ ಬೃಹತ್ ಮಧ್ಯಮ ಸಣ್ಣ ಉದ್ಯೋಗದಾತರ ಸಂಸ್ಥೆಗಳು ಭಾಗವಹಿಸಲಿವೆ. ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ನರ್ಸಿಂಗ್, ಪದವಿ, ಸ್ನಾತಕೋತ್ತರ ಪದವಿ, ಇಂಜಿನಿಯರಿಂಗ್ ಮತ್ತು ಇತರೆ ವಿದ್ಯಾರ್ಹತೆಯುಳ್ಳ ಆಸಕ್ತ ಅಭ್ಯರ್ಥಿಗಳು ಭಾಗವಹಿಸಬಹುದು.
ಉದ್ಯೋಗ ಆಕಾಂಕ್ಷಿಗಳು ನೋಂದಾವಣಿಯಾಗಲು https://skillconnect.kaushalkar.com ವೆಬ್‍ಸೈಟ್‍ಗೆ ಭೇಟಿ ನೀಡಬೇಕು. ರಿಜಿಸ್ಟರ್ ಮೇಲೆ ಕ್ಲಿಕ್ ಮಾಡಿ, ಉದ್ಯೋಗ ಮೇಳ ಮೇಲೆ ಕ್ಲಿಕ್ ಮಾಡಿ, ಅಭ್ಯರ್ಥಿ ನೋಂದಣಿ ಅರ್ಜಿಯನ್ನು ಸಂಪೂರ್ಣವಾಗಿ ಭರ್ತಿ ಮಾಡಬೇಕು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 99185991800 ಸಂಪರ್ಕಿಸುವಂತೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪತ್ನಿಯ ಕತ್ತು ಹಿಸುಕಿ ಕೊಂದ ಪಾಪಿ ಪತಿ