Mon. Dec 23rd, 2024

ಪ್ಲಾಸ್ಟಿಕ್ ಮುಕ್ತ ಮೈಸೂರು ನಿರ್ಮಾಣಕ್ಕೆ ಕೈಜೋಡಿಸಿ: ಪಾಲಿಕೆ ಆಯುಕ್ತರ ಮನವಿ

Share this with Friends

ಮೈಸೂರು, ಜು.2: ಪರಿಸರಕ್ಕೆ ಮಾರಕವಾದ ಪ್ಲಾಸ್ಟಿಕ್ ಬಳಕೆಯನ್ನು ಎಲ್ಲರೂ ತ್ಯಜಿಸುವ ಮೂಲಕ ಪ್ಲಾಸ್ಟಿಕ್‌‌ ಮುಕ್ತ ನಗರ ನಿರ್ಮಾಣಕ್ಕೆ ಕೈಜೋಡಿಸಬೇಕೆಂದು ಪಾಲಿಕೆ ಆಯುಕ್ತ ಆಶಾದ್ ಉರ್ ರೆಹಮಾನ್ ಶರೀಫ್ ಮನವಿ ಮಾಡಿದರು.

ನಗರದ ಚಾಮುಂಡಿಪುರಂನಲ್ಲಿ ಕೆ ಎಂ ಪಿ ಕೆ ಟ್ರಸ್ಟ್, ಅಂತರಾಷ್ಟ್ರೀಯ ಪ್ಲಾಸ್ಟಿಕ್ ಚೀಲ ಮುಕ್ತದಿನ ಅಂಗವಾಗಿ ಮನೆ ಮನೆಗೆ ತೆರಳಿ ಪ್ಲಾಸ್ಟಿಕ್ ಬ್ಯಾಕ್ ತ್ಯಜಿಸಿ ಬಟ್ಟೆ ಬ್ಯಾಗ್ ಬಳಿಸಿ ಘೋಷವಾಕ್ಯದೊಂದಿಗೆ ಆಯೋಜಿಸಿದ್ದ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಆಯುಕ್ತರು ಮಾತನಾಡಿದರು.

ಪ್ಲಾಸ್ಟಿಕ್ ನಿಷೇಧ ಹಾಗೂ ಪರಿಸರ ರಕ್ಷಣೆ ಜವಾಬ್ದಾರಿ ಕೇವಲ ಸರ್ಕಾರ ಹಾಗೂ ಸ್ಥಳೀಯ ಆಡಳಿತದ್ದು ಎಂಬ ಮನೋಭಾವದಿಂದ ಹೊರಬರಬೇಕು, ಸಾರ್ವಜನಿಕರು ತಮ್ಮ ಹೊಣೆ ಅರಿತು ಪರಿಸರ ರಕ್ಷಣೆಗೆ ಮುಂದಾಗಬೇಕು ಎಂದು ಮನವಿ ವಾಡಿದರು.

ಪ್ಲಾಸ್ಟಿಕ್ ಪರಿಸರಕ್ಕೆ ಮಾರಕ, ಭೂಮಿಯಲ್ಲಿ ಕೊಳೆಯದ ಇದು, ದಹಿಸಿದಾಗ ವಿಷಕಾರಕ ಅಂಶಗಳನ್ನು ಪರಿಸರಕ್ಕೆ ಬಿಡುಗಡೆ ಮಾಡುತ್ತದೆ. ಇದರಿಂದ ಕ್ಯಾನ್ಸ‌ರ್ ಸೇರಿ ಹಲವು ಮಾರಣಾಂತಿಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಪ್ರತಿಯೊಬ್ಬರು ಪ್ಲಾಸ್ಟಿಕ್ ಬಳಕೆಯನ್ನು ತ್ಯಜಿಸುವ ಸಂಕಲ್ಪ ಮಾಡಬೇಕು ಎಂದು ಆಯುಕ್ತರು ಕರೆನೀಡಿದರು.

ಪಾಲಿಕೆ ಆರೋಗ್ಯ ಅಧಿಕಾರಿ ಡಾ. ವೆಂಕಟೇಶ್ ಮಾತನಾಡಿ, ಪ್ಲಾಸ್ಟಿಕ್ ಬ್ಯಾಗು ಹಾಗು ವಸ್ತುಗಳನ್ನು ಬಳಸುವುದನ್ನು ನಿಲ್ಲಿಸಿ ಸುಂದರ ಪರಿಸರ ನಿರ್ಮಿಸಬೇಕೆಂದು ತಿಳಿಹೇಳಿದರು.

ಮುಂದಿನ ಪೀಳಿಗೆಗೆ ಪ್ಲಾಸ್ಟಿಕ್ ಮುಕ್ತ ಪರಿಸರ ಕೊಡುಗೆಯಾಗಿ ನೀಡಲು ಇಂದೇ ಶಪಥ ಮಾಡಿ ನಿಮ್ಮ ಮನೆಯನ್ನು ಸಂಪೂರ್ಣ ಪ್ಲಾಸ್ಟಿಕ್ ಮುಕ್ತವಾಗಿ ಮಾಡಿ ಇಂತಹ ಜಾಗೃತಿ ಕಾರ್ಯಕ್ರಮಗಳನು ಹೆಚ್ಚು ಆಯೋಜಿಸಲು ಸಂಘ ಸಂಸ್ಥೆಗಳು ಮುಂದಾಗಬೇಕೆಂದು ಅವರು ಸಲಹೆ ನೀಡಿದರು.

ಕಾರ್ಯಕ್ರಮದ ರೂವಾರಿ ಕೆಎಂಪಿ ಕೆ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್, ಜೀವಧಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಮುತ್ತಣ್ಣ, ಅಜಯ್ ಶಾಸ್ತ್ರಿ,ವಲಯ ಆಯುಕ್ತ ಮಂಜುನಾಥ್ ರೆಡ್ಡಿ, ಸಹಾಯಕ ಕಾರ್ಯಪಾಲಕ ಅಭಿಯಂತರರಾದ
ಮೀನಾಕ್ಷಿ , ಮೈಸೂರು ಮಹಾನಗರಪಾಲಿಕೆ ಪರಿಸರ ಅಭಿಯಂತರಾದ
ಜ್ಯೋತಿ, ಹಿರಿಯ ಆರೋಗ್ಯ ನಿರೀಕ್ಷಕರಾದ ಶಿವಪ್ರಸಾದ್ ,ಕಿರಿಯ ಆರೋಗ್ಯ ನಿರೀಕ್ಷಕರಾದ ಪ್ರೀತಿ , ರೇಣುಕಾ ರಾಜ್, ವಿನಯ್ ಕಣಗಾಲ್, ಶ್ರೀಕಾಂತ್ ಕಶ್ಯಪ್, ಎಸ್ ಎನ್ ರಾಜೇಶ್, ಸುಚಿಂದ್ರ, ಸಚಿನ್ ನಾಯಕ್ ಮತ್ತಿತರರು ಹಾಜರಿದ್ದರು.


Share this with Friends

Related Post