ಮೈಸೂರು, ಜೂ.24: ಜೂನ್ 26ರಂದು ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರುದ್ಧ ಮಾನವ ಸರಪಳಿ ಹಮ್ಮಿಕೊಳ್ಳಲಾಗಿದೆ.
ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರುದ್ಧದ ಅಂತರರಾಷ್ಟ್ರೀಯ ದಿನ ಪ್ರತಿ ವರ್ಷ ಜೂನ್ 26ರಂದು ನಡೆಯುತ್ತದೆ.
26ರಂದು ಬುಧವಾರ ಬೆಳಗ್ಗೆ 10 ಗಂಟೆಗೆ ಮೈಸೂರಿನ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗ ಡಾ. ಎಸ್ ಕೆ ಮಿಠಲ್ ಅವರ ನೇತೃತ್ವದಲ್ಲಿ ಪುಷ್ಪಾಂಜಲಿ ಸೇವಾ ಸಂಸ್ಥೆ ಮತ್ತು ಅಗರ್ವಾಲ್ ಸಮಾಜ ಇವರ ಸಂಯುಕ್ತ ಆಶಯದಲ್ಲಿ ಯುವ ಜನರಿಗೆ ಪ್ರಮಾಣವಚನ ಹಾಗೂ ಮಾನವ ಸರಪಳಿ ನಿರ್ಮಿಸುವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಸಂಸ್ಥೆಗಳ ಮುಖ್ಯಸ್ಥರಾದ ಡಾಕ್ಟರ್ ವಿಟ್ಟಲ್, ಪತ್ರಿಕಾ ಅಂಕಣ ಬರಹಗಾರರಾದ ಡಾ. ವಿ ರಂಗನಾಥ್, ಗೋಪಾಲಸ್ವಾಮಿ ಸಂಸ್ಥೆಯ ಮುಖ್ಯಸ್ಥ ಮಂಜುನಾಥ, ಸಾಮಾಜಿಕ ಕಾರ್ಯಕರ್ತ ವಿಕ್ರಮ ಅಯ್ಯಂಗಾರ್ ಪ್ರಭಾಕರ್ ಸಿಂದೆ ಮಾಹಿತಿ ನೀಡಿದರು.
ಇದೇ ವೇಳೆ ಅಂತರಾಷ್ಟ್ರೀಯ ಮಾದಕ ದ್ರವ್ಯ ಸೇವನೆ ಮತ್ತು ಅಕ್ರಮ ಮಾದಕ ವಸ್ತು ಕಳ್ಳಸಾಗಣೆ ವಿರೋಧಿ ದಿನದ
ಜಾಗೃತಿ ಕರಪತ್ರ ಬಿಡುಗಡೆಗೊಳಿಸಲಾಯಿತು.