Fri. Nov 1st, 2024

ಕೈವಾರ ತಾತಯ್ಯ ಒಂದೇ ಸಮುದಾಯಕ್ಕೆ ಸೀಮಿತರಲ್ಲ: ಹರೀಶ್ ಗೌಡ

Share this with Friends

ಮೈಸೂರು, ಮಾ.25: ಮಹನೀಯರ ಜಯಂತಿಗಳು ಆಚರಣೆಗಷ್ಟೆ ಸೀಮಿತವಾಗದೆ ಅವರ ಆದರ್ಶ ತತ್ವಗಳನ್ನು ನಾವು ಮೈಗೂಡಿಸಿಕೊಳ್ಳಬೇಕು ಎಂದು ಶಾಸಕ ಕೆ ಹರೀಶ್ ಗೌಡ ಹೇಳಿದರು.

ಮೈಸೂರು ನಗರದ ಡಿ ದೇವರಾಜ ಅರಸು ರಸ್ತೆಯಲ್ಲಿ ಶ್ರೀ ಕೈವಾರ ತಾತಯ್ಯ ಬಣಜಿಗ (ಬಲಿಜ)ಶ್ರೀ ಯೋಗಿ ನಾರಾಯಣ ಯತೀಂದ್ರ (ಕೈವಾರ ತಾತಯ್ಯ) ಅವರ 298 ನೇ ಜಯಂತೋತ್ಸವ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ
ಮಾತನಾಡಿದರು.

ತ್ರಿಕಾಲ ಜ್ಞಾನಿಯಾಗಿದ್ದ ಕೈವಾರ ತಾತಯ್ಯ ಅವರು ಪ್ರಾಪಂಚಿಕ ಆಗು-ಹೋಗುಗಳನ್ನು ಅರಿತು ಮನುಕುಲದ ಒಳಿತಿಗಾಗಿ ಅಪಾರ ಕೊಡುಗೆ ನೀಡಿದ್ದಾರೆ.

17ನೇ ಶತಮಾನದಲ್ಲಿ ಜೀವಿಸಿದ್ದ ಕೈವಾರ ತಾತಯ್ಯ ಅವರು ಪವಾಡ ಪುರುಷರಾಗಿದ್ದರು. ತಾತಯ್ಯ ಅವರನ್ನು ಒಂದೇ ಸಮುದಾಯಕ್ಕೆ ಸೀಮಿತಗೊಳಿಸದೆ ಎಲ್ಲ ಸಮಾಜಗಳು ಸ್ಮರಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದಿ, ತಾರತಮ್ಯ, ಅಸಮಾನತೆ ಹೋಗಲಾಡಿಸಲು ತಾತಯ್ಯ ಕೈಗೊಂಡ ಸಾಮಾಜಿಕ ಸುಧಾರಣೆ ಇಂದಿಗೂ ಮಾದರಿ, ಸಮಾಜದ ಶ್ರೇಯೋಭಿವೃದ್ಧಿಗೆ ದುಡಿದವರು ಇತಿಹಾಸ ಸೃಷ್ಟಿ ಸುತ್ತಾರೆ. ಅಂತಹ ಶ್ರೇಷ್ಠ ದಾರ್ಶನಿಕರಲ್ಲಿ ತಾತಯ್ಯ ಅಗ್ರಗಣ್ಯರು. ಕಾಲಜ್ಞಾನ ಭವಿಷ್ಯವನ್ನು ಇಡೀ ಜಗತ್ತಿಗೆ ತೋರಿಸಿಕೊಟ್ಟವರು ಕೈವಾರ ತಾತಯ್ಯ
ಎಂದು ಹರೀಶ್ ಗೌಡ ಬಣ್ಣಿಸಿದರು.

ಸಂಘದ ಗೌರವಾಧ್ಯಕ್ಷ ಆನಂದ್ ಶೆಟ್ಟಿ ಮಾತನಾಡಿ,ತಾತಯ್ಯ ಅವರು ಸಮಾಜ ಸುಧಾರಣೆಗೆ ಅಪಾರ ಕೊಡುಗೆ ನೀಡಿದ್ದಾರೆ. ಕೈವಾರ ಕ್ಷೇತ್ರ ಬಹಳ ಪವಿತ್ರವಾದದ್ದು ಹಾಗೂ ಧಾರ್ಮಿಕ ಪ್ರವಾಸಿ ತಾಣವೂ ಆಗಿದೆ ಎಂದು ತಿಳಿಸಿದರು.

ನಂತರ ಸಾರ್ವಜನಿಕರಿಗೆ
ಸಿಹಿ ಹಾಗೂ ಮಜ್ಜಿಗೆ ಕಾರ್ಯದರ್ಶಿ ಉಮೇಶ್ ಕೆ ವಿತರಿಸಿದರು.

ಸಂಘದ ನರೇಶ್ ಬಾಬು, ಪ್ರಕಾಶ್, ಯತಿರಾಜ್, ನಗರ ಪಾಲಿಕೆ ಮಾಜಿ ಸದಸ್ಯರಾದ ಪ್ರಶಾಂತ್ ಗೌಡ, ಮೈ ಕಾ ಪ್ರೇಮ್ ಕುಮಾರ್, ಮೂಡ ಮಾಜಿ ಸದಸ್ಯರಾದ ನವೀನ್ ಕುಮಾರ್, ಕರ್ನಾಟಕ ಹಿತರಕ್ಷಣಾ ವೇದಿಕೆಯ ಅಧ್ಯಕ್ಷರಾದ ವಿನಯ್ ಕುಮಾರ್, ರಮೇಶ್ , ರಾಜೀವ್, ಗುರುರಾಜ್ ಶೆಟ್ಟಿ, ಎಸ್ ಎನ್ ರಾಜೇಶ್, ಪ್ರಮೋದ್ ಗೌಡ, ರವಿಚಂದ್ರ, ಜಿ ರಾಘವೇಂದ್ರ, ಕೃಷ್ಣಮೂರ್ತಿ, ಸಂತೋಷ್ ನಾಯ್ಡು ಮತ್ತಿತರರು ಭಾಗವಹಿಸಿದ್ದರು.


Share this with Friends

Related Post