Mon. Dec 23rd, 2024

ಕನ್ನಡ ಪದಬಳಕೆ ಸರಿಯಾಗಿರಲಿ ಅಭಿಯಾನ

Share this with Friends

ಮೈಸೂರು: ಕನ್ನಡ ಪದಗಳನ್ನು ಸರಿಯಾದ ರೀತಿಯಲ್ಲಿ ಬಳಕೆ ಮಾಡುವಂತೆ ಜಾಗೃತಿ ಮೂಡಿಸಲು ಕರ್ನಾಟಕ ಹಿತರಕ್ಷಣಾ ವೇದಿಕೆ ನಗರದಲ್ಲಿ ಅಭಿಯಾನ ಹಮ್ಮಿಕೊಂಡಿತು.

ಕನ್ನಡ ರಾಜ್ಯೋತ್ಸವ ಹಾಗೂ ದೀಪಾವಳಿ ಹಬ್ಬದ ಅಂಗವಾಗಿ ಈ ಅಭಿಯಾನವನ್ನು ಕರ್ನಾಟಕ ಹಿತರಕ್ಷಣಾ ವೇದಿಕೆ ಹಮ್ಮಿಕೊಂಡಿದ್ದು,ಇಂದು ಡಿ ದೇವರಾಜ ಅರಸು ರಸ್ತೆ, ವಿನೋಬ ರಸ್ತೆ, ಶಿವರಾಂಪೇಟೆ ಸುತ್ತಮುತ್ತ ಅಂಗಡಿ ಮುಂಗಟ್ಟುಗಳಿಗೆ ತೆರಳಿ ಗುಲಾಬಿ ಹೂ ನೀಡಿ ಕನ್ನಡ ಪದಗಳನ್ನು ಸರಿಯಾದ ರೀತಿಯಲ್ಲಿ ಬಳಸುವಂತೆ ಮನವಿ ಮಾಡಿ ಜಾಗೃತಿ ಮೂಡಿಸಲಾಯಿತು.

ಇತ್ತೀಚೆಗೆ ಹಬ್ಬಗಳ ಹೆಸರನ್ನು ಅಪಭ್ರಂಶ ಗೊಳಿಸುತ್ತಿರುವ ಉದಾಹರಣೆಗಳು ಹೆಚ್ಚುತ್ತಿವೆ.ಉದಾಹರಣೆಗೆ ದೀಪಾವಳಿಯನ್ನು ದಿವಾಳಿ ಎಂದು ಶುಭ ಕೋರುವುದು, ದಸರಾವನ್ನು ದುಸ್ಸೆರಾ ಎಂದು ತಪ್ಪಾಗಿ ಅನ್ಯ ಭಾಷೆ ಶೈಲಿಯಲ್ಲಿ ಪದಬಳಕೆ ಮಾಡಿ ಶುಭ ಕೋರುವುದು ಸರಿಯಲ್ಲ ಎಂದು ಖಂಡಿಸಲಾಯಿತು.

ಇಂತಹ ಪದ ಬಳಕೆ ಅರ್ಥವೇ ಬೇರೆಯಿರುತ್ತದೆ, ಹಾಗಾಗಿ ಕರ್ನಾಟಕ ಹಿತ ರಕ್ಷಣಾ ವೇದಿಕೆ ವತಿಯಿಂದ ಎಲ್ಲಾ ಅಂಗಡಿ ಮುಂಗಟ್ಟುಗಳಿಗೆ ತೆರಳಿ ಗುಲಾಬಿ ನೀಡಿ ಈ ಮನವಿ ಮಾಡಿಕೊಳ್ಳಲಾಯಿತು.

ಕೆಲವು ಅಂಗಡಿ ಮುಂಗಟ್ಟುಗಳಲ್ಲಿ ದೀಪಾವಳಿಯನ್ನು ದಿವಾಳಿಯೆಂದು ಬರೆದು ಶುಭಕೋರುತ್ತಿರುವದನ್ನು ಖಂಡಿಸಿ ಅವರಿಗೆ ತಿಳಿಹೇಳಿ ಕನ್ನಡವನ್ನು ಸರಿಯಾಗಿ ಪ್ರಯೋಗಿಸಿ ಗೌರವಿಸಿ ಎಂದು ಮನವಿ
ಮಾಡಿದ್ದಾಗಿ ಕರ್ನಾಟಕ ಹಿತ ರಕ್ಷಣಾ ವೇದಿಕೆ ಅಧ್ಯಕ್ಷರಾದ ವಿನಯ್ ಕುಮಾರ್ ತಿಳಿಸಿದರು.

ಅಭಿಯಾನದಲ್ಲಿ ಕೆಪಿಸಿಸಿ ಸದಸ್ಯ ನಜರ್ಬಾದ್ ನಟರಾಜ್, ಗುರುರಾಜ್ ಶೆಟ್ಟಿ, ಪ್ರಮೋದ್, ನಿತಿನ್, ರವಿಚಂದ್ರ, ವರುಣ ಮಹಾದೇವ್, ಮಂಜುನಾಥ್, ವಿಶಾಲ್, ಮಂಜು, ಫಾಲ್ಕನ್ ಮಾದೇಗೌಡ, ಸೋಮಶೇಖರ್ ಆಚಾರ್ ಮತ್ತಿತರರು ಪಾಲ್ಗೊಂಡಿದ್ದರು.


Share this with Friends

Related Post