Tue. Dec 24th, 2024

ಗಾಂಧಿ ಫ್ಯಾಮಿಲಿಗೆ ರಾಜ್ಯದಿಂದ ಕಪ್ಪ ಕಾಣಿಕೆ:ವಿಜಯೇಂದ್ರ ಆರೋಪ

Share this with Friends

ಬೆಂಗಳೂರು,ಆ.4: ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಭ್ರಷ್ಟ ಕಾಂಗ್ರೆಸ್ ಸರ್ಕಾರವು ಹಣವನ್ನು ಲೂಟಿ ಮಾಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದರು.

ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರುಗಳು ಗಾಂಧಿ ಕುಟುಂಬಕ್ಕೆ ಕಪ್ಪ ಕಾಣಿಕೆ ಸಲ್ಲಿಸುತ್ತಿದ್ದಾರೆ ಎಂದು ದೂರಿದರು.

ಮೈಸೂರು ಚಲೋ ಪಾದಯಾತ್ರೆಯ ಎರಡನೇ ದಿನವಾದ ಭಾನುವಾರ ಬಿಡದಿಯಲ್ಲಿ ಪಾದಯಾತ್ರೆಗೆ ಚಾಲನೆ ಕೊಟ್ಟ ನಂತರ ಅವರು ಮಾತನಾಡಿದರು.

ಪರಿಶಿಷ್ಟ ಜಾತಿ, ಪಂಗಡದ ಪರವಾಗಿ, ಬಡ ಜನರ ಪರವಾಗಿ ಪ್ರಶ್ನಿಸಿದ ವಿಪಕ್ಷಕ್ಕೆ ಉತ್ತರ ಕೊಡುವುದು ಬಿಟ್ಟು ನಮಗೇ ಮರುಪ್ರಶ್ನೆ ಹಾಕುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮುಖ್ಯಮಂತ್ರಿಯವರೇ, ನೀವು ರಾಜ್ಯದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಹಿಂದ ಅಭಿವೃದ್ಧಿ ಹೆಸರಿನಿಂದ ಅಧಿಕಾರಕ್ಕೆ ಬಂದಿದ್ದೀರಿ. ನಿಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಅವರ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ಲೂಟಿ ಮಾಡಿದ್ದನ್ನು ಸ್ವತಃ ನೀವೇ ಸದನದಲ್ಲಿ ಒಪ್ಪಿಕೊಂಡಿದ್ದೀರಿ ಹಾಗಾಗಿ ನೀವು ನಮಗೆ ಉತ್ತರ ಕೊಡಬೇಕು ಎಂದು ಒತ್ತಾಯಿಸಿದರು.

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಅಧಿಕಾರದ ದರ್ಪ, ಅಹಂನಿಂದ ಹಾಗೆ ಮಾತನಾಡುತ್ತಿದ್ದಾರೆ. ಅವರು ರಾಜ್ಯದ ಜನತೆಗೆ ಉತ್ತರ ಕೊಡಲಿ ಎಂದು ಟಾಂಗ್ ನೀಡಿದರು.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಬಿಡದಿಯಲ್ಲಿರುವ ಟೊಯೊಟಾ ಫ್ಯಾಕ್ಟರಿ ಕೂಡ ಹೊರರಾಜ್ಯಕ್ಕೆ ಹೋಗುವ ಪರಿಸ್ಥಿತಿ ಉಂಟಾಗಿದೆ,ಇನ್ನು
ಹೊಸ ಉದ್ಯಮಗಳು, ಕೈಗಾರಿಕೆಗಳು ನಮ್ಮ ರಾಜ್ಯಕ್ಕೆ ಬರುತ್ತಿಲ್ಲ,ಇದು ಬರೀ ಲೂಟಿ ಸರ್ಕಾರ ಎಂದು ‌ವಿಜಯೇಂದ್ರ ಕಿಡಿಕಾರಿದರು.


Share this with Friends

Related Post