ಬೆಂಗಳೂರು,ಏ.10 : ಮಾ.1ರಿಂದ ಮಾ. 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಶೇ 81.15 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆ ಇಂದು ಬೆಳಗ್ಗೆ 10 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಕಳೆದ ಮಾರ್ಚ್ 1 ರಿಂದ 27 ರವರೆಗೆ ರಾಜ್ಯದ 1,124 ಕೇಂದ್ರಗಳಲ್ಲಿ ನಡೆದ ದ್ವಿತೀಯ ಪಿಯುಸಿ-1 ರ ಪರೀಕ್ಷೆಗೆ ಒಟ್ಟು 6,81,079 ವಿದ್ಯಾರ್ಥಿಗಳು ಹಾಜರಾಗಿದ್ದರು. ಇದರಲ್ಲಿ 5,22,690 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
HIGHLIGHTS :
ಕಳೆದ ಮಾರ್ಚ್ ತಿಂಗಳಿನಲ್ಲಿ ನಡೆದ ದ್ವಿತೀಯ ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿ ದಾಖಲೆಯ ಶೇಕಡಾ 81.15 ರಷ್ಟು ಫಲಿತಾಂಶ ಬಂದಿದೆ. ಎಂದಿನಂತೆ ಈ ಬಾರಿಯೂ ವಿದ್ಯಾರ್ಥಿಗಳಿಗಿಂತ ವಿದ್ಯಾರ್ಥಿನಿಯರದೇ ಫಲಿತಾಂಶದಲ್ಲಿ ಮೇಲುಗೈ ಸಾಧಿಸಿದ್ದು, ನಗರ ಪ್ರದೇಶಗಳಿಗೆ ಹೋಲಿಸಿದರೆ ಗ್ರಾಮೀಣ ಭಾಗದ ಫಲಿತಾಂಶ ಏರಿಕೆಯಾಗಿದೆ.
2023 ರಲ್ಲಿ 74.67 ರಷ್ಟು ಫಲಿತಾಂಶ ಬಂದಿತ್ತು. ಈ ಬಾರಿ ಶೇ.6.4 ರಷ್ಟು ಏರಿಕೆಯಾಗಿದ್ದು, ದಾಖಲೆಯ 81.15 ರಷ್ಟು ಫಲಿತಾಂಶ ದಾಖಲಾಗಿರುವುದು ವರ್ಷದಿಂದ ವರ್ಷಕ್ಕೆ ಫಲಿತಾಂಶ ಏರಿಕೆಯಾಗುತ್ತಿರುವುದರ ಸಕಾರಾತ್ಮಕ ಬೆಳವಣಿಗೆಯಾಗಿದೆ.
ಕಲಾವಿಭಾಗದಲ್ಲಿ ಶೇ.68.36, ವಾಣಿಜ್ಯ ಶೇ.80.94, ವಿಜ್ಞಾನ ಶೇ.89.96 ಫಲಿತಾಂಶ ಹೊರಬಂದಿದೆ. ಜಿಲ್ಲಾವಾರು ಫಲಿತಾಂಶದಲ್ಲಿ ಎಂದಿನಂತೆ ಈ ಬಾರಿಯೂ ದಕ್ಷಿಣ ಕನ್ನಡ, ಉಡುಪಿ, ವಿಜಯಪುರ ಕ್ರಮವಾಗಿ ಮೊದಲ ಸ್ಥಾನದಲ್ಲಿದ್ದರೆ, ಗದಗ ಕೊನೆಯ ಸ್ಥಾನದಲ್ಲಿದೆ.
* ಕಲಾವಿಭಾಗದಲ್ಲಿ ಬೆಂಗಳೂರಿನ ಎನ್‍ಎನ್‍ಕೆಆರ್‍ವಿ ಪಿಯು ಕಾಲೇಜಿನ ಮೇಧಾ ಡಿ. 596, ವಿಜಯಪುರದ ಎಸ್‍ಎಸ್ ಪಿಯು ಕಾಲೇಜಿನ ವೇದಾಂತ್ ಜಯನುಬಾ ನವಿ 596, ಬಳ್ಳಾರಿ ಜಿಲ್ಲೆ ಕೊಟ್ಟೂರು ತಾಲೂಕಿನ ಕೂಡ್ಲಗಿಯ ಇಂದು ಪಿಯು ಕಾಲೇಜಿನ ಕವಿತಾ ಬಿ.ವಿ. 596 ಅಂಕಗಳನ್ನು ಪಡೆದಿದ್ದಾರೆ.
* ವಾಣಿಜ್ಯ ವಿಭಾಗದಲ್ಲಿ ತುಮಕೂರಿನ ವಿದ್ಯಾನಿ ಪಿಯು ಕಾಲೇಜಿನ ಜ್ಞಾನವಿ ಎಂ. 597, ಶಿವಮೊಗ್ಗ ಜಿಲ್ಲೆ ಶಿಕಾರಿಪುರದ ಕುಮದ್ವತಿ ಕಾಲೇಜಿನ ಪವನ್ ಎಂ.ಎಸ್. 596, ಉಡುಪಿಯ ಪೂರ್ಣ ಪ್ರಜ್ಞಾ ಪಿಯು ಕಾಲೇಜಿನ ಹರ್ಷಿತಾ ಎಸ್.ಎಚ್. 596 ಅಂಕ ಪಡೆದಿದ್ದಾರೆ.
* ಬೆಳಗ್ಗೆ 11 ಗಂಟೆಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ಸೈಟ್ ನಲ್ಲಿ ಫಲಿತಾಂಶ ಲಭ್ಯವಿರಲಿದೆ. karresults.nic.in ಈ ವೆಬ್ ಸೈಟ್ ನಲ್ಲಿ ಫಲಿತಾಂಶ ನೋಡಬಹುದು.
* ಈ ಬಾರಿ ಶೇ.85 ಅಥವಾ ಅದಕ್ಕಿಂತ ಹೆಚ್ಚಿನ ಅಂಗಳನ್ನು 1,53,370 ವಿದ್ಯಾರ್ಥಿಗಳು ಪಡೆದಿದ್ದರೆ ಶೇ.85 ಕ್ಕಿಂತ ಕಡಿಮೆ ಹಾಗೂ ಶೇ. 60 ಅಥವಾ ಶೇ.60 ಕ್ಕಿಂತ ಕಡಿಮೆ ಅಂಕವನ್ನು 2,89,733 ವಿದ್ಯಾರ್ಥಿಗಳು ಪಡೆದುಕೊಂಡಿದ್ದಾರೆ.
* 26 ಅನುದಾನಿತ ಪದವಿ ಪೂರ್ವ ಕಾಲೇಜಿನಲ್ಲಿ ಶೇ.100 ರಷ್ಟು ಫಲಿತಾಂಶ ಬಂದಿದ್ದರೆ, 6 ಕಾಲೇಜುಗಳಲ್ಲಿ ಶೂನ್ಯ, 345 ಅನುದಾನರಹಿತ ಪದವಿ ಪೂರ್ವ ಕಾಲೇಜುಗಳಲ್ಲಿ ಶೇ.100 ರಷ್ಟು ಹಾಗೂ 26 ಕಾಲೇಜುಗಳಲ್ಲಿ ಶೂನ್ಯ ಫಲಿತಾಂಶ ಹಾಗೂ ಒಂದು ವಿಭಜಿತ ಪದವಿ ಪೂರ್ವ ಕಾಲೇಜಿನಲ್ಲಿ ಶೇ.100 ರಷ್ಟು ಹಾಗೂ ಒಂದು ಕಾಲೇಜಿನಲ್ಲಿ ಶೂನ್ಯ ಫಲಿತಾಂಶ ಸೇರಿದಂತೆ ಒಟ್ಟು 463 ಕಾಲೇಜಿನಲ್ಲಿ ಶೇ.100 ರಷ್ಟು ಫಲಿತಾಂಶ ಮತ್ತು 35 ಕಾಲೇಜುಗಳಲ್ಲಿ ಶೂನ್ಯ ಫಲಿತಾಂಶ ದಾಖಲಾಗಿದೆ.
*ಎಲ್ಲಾವಿಷಯಗಳಿಗೆ ಗೈರುಹಾಜರಾದ ವಿದ್ಯಾರ್ಥಿಗಳ ಸಂಖ್ಯೆ: 17,299
*ಪರೀಕ್ಷೆಗೆ ಹಾಜರಾದ ಒಟ್ಟು ವಿದ್ಯಾರ್ಥಿ ಗಳ ಸಂಖ್ಯೆ: 6,81,079
*ತೇರ್ಗಡೆಯಾದ ಒಟ್ಟು ವಿದ್ಯಾರ್ಥಿ ಗಳ ಸಂಖ್ಯೆ: 5,52,690
*2024ರಲ್ಲಿ ಶೇ ಕಡವಾರು ಉತ್ತೀ ರ್ಣ ತಾ ಪ್ರಮಾಣ 81.15% ಇದ್ದು, ಇದು 2023ರ ವರ್ಷದ ಉತ್ತೀ ರ್ಣ ತಾ ಪ್ರಮಾಣ 74.67% ಗಿಂತ6.48%ರಷ್ಟು ಹೆಚ್ಚಿದೆ.
*ಫಲಿತಾಂ ಶವನ್ನು ಕಾಲೇಜುಗಳಲ್ಲಿ ಪ್ರಕಟಿಸುವ ದಿನಾಂಕ: 10-04-2024 ಮಧ್ಯಾಹ್ನ 3ಗಂಟೆಗೆ