ಬೆಂಗಳೂರು: ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಅಂತಿಮ ಹಂತಕ್ಕೆ ತಲುಪಿದೆ. ಸುದೀರ್ಘ ಚರ್ಚೆ ಹಾಗೂ ಹಲವು ಸುತ್ತಿನ ಸಮಾಲೋಚನೆಗಳ ಬಳಿಕ, ಕಾಂಗ್ರೆಸ್ ಹೈಕಮಾಂಡ್ ಖಾಲಿ ಇದ್ದ ಎಲ್ಲಾ 20 ಸಚಿವ ಸ್ಥಾನಗಳಿಗೆ ನೂತನ ಶಾಸಕರ ಹೆಸರನ್ನು ಅಂತಿಮಗೊಳಿಸಿ ಅಧಿಕೃತ ಪಟ್ಟಿ ಬಿಡುಗಡೆ ಮಾಡಿದೆ.
ಲೋಕಭವನದಲ್ಲಿ ಪ್ರಮಾಣ ವಚನ:
ಜಾತಿ ಮತ್ತು ಪ್ರಾದೇಶಿಕ ಸಮತೋಲನವನ್ನು ಗಮನದಲ್ಲಿಟ್ಟುಕೊಂಡು ಈ ಪಟ್ಟಿಯನ್ನು ಸಿದ್ಧಪಡಿಸಲಾಗಿದ್ದು, ಲೋಕಭವನದ ಗಾಜಿನ ಮನೆಯಲ್ಲಿ ನೂತನ ಸಚಿವರ ಪದಗ್ರಹಣ ಹಾಗೂ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಆಯೋಜನೆಗೊಂಡಿದೆ.ಇಂದು ಸಂಜೆ 5 ಗಂಟೆಗೆ ಪ್ರಮಟಣವಚನ ಸ್ವೀಕಾರ ಸಮಾರಂಭ ನಿಗದಿಯಾಗಿದೆ.
ಈ ವಿಸ್ತರಣೆಯ ಮೂಲಕ ಸಚಿವ ಸಂಪುಟದಲ್ಲಿ ಹೊಸ ಮುಖಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಸಂಪುಟ ಸೇರಲಿರುವ ನೂತನ ಸಚಿವರ ಪಟ್ಟಿ:
ಪಿ. ಎಂ. ನರೇಂದ್ರಸ್ವಾಮಿ
ಶಿವರಾಜ ತಂಗಡಗಿ
ರುದ್ರಪ್ಪ ಲಮಾಣಿ
ಕೆ. ಎಸ್. ಬಸವಂತಪ್ಪ
ಬಿ. ನಾಗೇಂದ್ರ
ಟಿ. ರಘುಮೂರ್ತಿ
ಬಿ. ಝಡ್. ಝಮೀರ್ ಅಹಮದ್ ಖಾನ್
ರಿಜ್ವಾನ್ ಅರ್ಷದ್
ಸಂತೋಷ್ ಲಾಡ್
ಮಧು ಬಂಗಾರಪ್ಪ
ಪುಟ್ಟರಂಗಶೆಟ್ಟಿ
ಎಸ್.ಎಸ್.ಮಲ್ಲಿಕಾರ್ಜುನ
ಅಜಯ್ ಸಿಂಗ್
ಎನ್. ಚಲುವರಾಯಸ್ವಾಮಿ
ಕೆ. ಎಂ. ಶಿವಲಿಂಗೇಗೌಡ
ಎಚ್. ಸಿ. ಬಾಲಕೃಷ್ಣ
ಗಾಯತ್ರಿ ಶಾಂತೇಗೌಡ
ಬಸವರಾಜ ರಾಯರೆಡ್ಡಿ
ವಿಜಯಾನಂದ ಕಾಶಪ್ಪನವರ್
ಲಕ್ಷ್ಮಣ ಸವದಿ
ಪ್ರಮುಖ ಸಾಂವಿಧಾನಿಕ ಹುದ್ದೆಗಳ ಜವಾಬ್ದಾರಿ:
ಸಚಿವರ ಪಟ್ಟಿಯ ಜೊತೆಗೆ ಇತರ ಪ್ರಮುಖ ಹುದ್ದೆಗಳಿಗೂ ಹೆಸರುಗಳನ್ನು ಅಂತಿಮಗೊಳಿಸಲಾಗಿದೆ. ವಿಧಾನಸಭೆಯ ನೂತನ ಅಧ್ಯಕ್ಷರಾಗಿ (ಸ್ಪೀಕರ್) ಜಿ.ಎಸ್. ಪಾಟೀಲ್,ಡೆಪ್ಯೂಟಿ ಸ್ಪೀಕರ್ ಆಗಿ ಎ.ಎಸ್ ಪೊನ್ನಣ್ಣ ಅವರು ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ. ಇದರೊಂದಿಗೆ, ವಿಧಾನ ಪರಿಷತ್ ಸಭಾಪತಿಯಾಗಿ ಸಲೀಂ ಅಹ್ಮದ್ ಹಾಗೂ ಉಪ ಸಭಾಪತಿಯಾಗಿ ಹಿರಿಯ ನಾಯಕಿ ಉಮಾಶ್ರೀ ಅವರ ಹೆಸರುಗಳನ್ನು ಘೋಷಿಸಲಾಗಿದೆ.


