Fri. Mar 6th, 2026

ಕೆಇಎ: ಎಸ್ ಡಿ ಎಲ್ ಮತ್ತು ಕೃಷಿ ಮಾರಾಟ ಇಲಾಖೆಯ ವಿವಿಧ ಹುದ್ದೆಗಳಿಗೆ ಜ.18ಕ್ಕೆ ನೇಮಕಾತಿ ಪರೀಕ್ಷೆ

Share this with Friends

ಬೆಂಗಳೂರು:ಕೆ ಎಸ್ ಡಿ ಎಲ್ ಮತ್ತು ಕೃಷಿ ಮಾರಾಟ ಇಲಾಖೆಯ ವಿವಿಧ ಹುದ್ದೆಗಳಿಗೆ ಜನವರಿ 10 ಮತ್ತು 12ರ ಬದಲಿಗೆ ಜನವರಿ 18ರಂದು ಲಿಖಿತ ಪರೀಕ್ಷೆ ನಡೆಸಲಾಗುವುದು ಹಾಗು ಕರ್ನಾಟಕ ವಿದ್ಯುತ್ ನಿಗಮದ (ಕೆಪಿಸಿಎಲ್) ಒಟ್ಟು 622 ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಡಿ.27 ಮತ್ತು 28ರಂದು ನಗರದಲ್ಲಿ ಮರು ಪರೀಕ್ಷೆ ನಡೆಸಲಾಗುತ್ತದೆ  ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.

ಕೃಷಿ‌ ಮಾರಾಟ ಇಲಾಖೆಯ ಮಾರುಕಟ್ಟೆ ಮೇಲ್ವಿಚಾರಕ ಹುದ್ದೆಗೆ ಜನವರಿ 10ರಂದು ಹಾಗೂ ಕರ್ನಾಟಕ ಸಾಬೂನು ಮತ್ತು ಮಾರ್ಜಕ ಲಿಮಿಟೆಡ್‌ ನ ಕಿರಿಯ ಅಧಿಕಾರಿ (ಉತ್ಪಾದನೆ ಮತ್ತು ನಿರ್ವಹಣೆ), ಕಿರಿಯ ಅಧಿಕಾರಿ (ಸಾಮಗ್ರಿ ಮತ್ತು ಉಗ್ರಾಣ) ಹುದ್ದೆಗಳಿಗೆ ಜನವರಿ 12ರಂದು ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ ಕೆಲವು ತಾಂತ್ರಿಕ ಕಾರಣಗಳಿಂದಾಗಿ ಈ ದಿನಾಂಕಗಳ ಬದಲಿಗೆ ಜನವರಿ 18 ರಂದು ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.ಉಳಿದಂತೆ ಜನವರಿ 19ರ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಹೆಚ್ಚಿನ ವಿವರಗಳಿಗೆ ಕೆಇಎ ವೆಬ್ ಸೈಟ್ ನೋಡಲು ಅವರು ಕೋರಿದ್ದಾರೆ.

ಕೆಪಿಸಿಎಲ್: 622 ಹುದ್ದೆಗೆ ಮರು ಪರೀಕ್ಷೆ:

ಕರ್ನಾಟಕ ವಿದ್ಯುತ್ ನಿಗಮದ (ಕೆಪಿಸಿಎಲ್) ಒಟ್ಟು 622 ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಡಿ.27 ಮತ್ತು 28ರಂದು ನಗರದಲ್ಲಿ ಮರು ಪರೀಕ್ಷೆ ನಡೆಸುತ್ತಿದ್ದು, ಬಿಗಿ ಕ್ರಮಗಳನ್ನು ಕೈಗೊಂಡಿದೆ.ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಈ ಹುದ್ದೆಗಳಿಗೆ ಮರು ಪರೀಕ್ಷೆ ನಡೆಸಲಾಗುತ್ತಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.

ಕೆಮಿಕಲ್ ಸೂಪರ್ ವೈಸರ್, ವಿವಿಧ ವಿಭಾಗಗಳ ಸಹಾಯಕ ಎಂಜಿನಿಯರ್ ಗಳ ನೇಮಕಕ್ಕೆ ಬೆಂಗಳೂರಿನ 17 ಕೇಂದ್ರಗಳಲ್ಲಿ ಡಿ.27ರಂದು ಲಿಖಿತ ಪರೀಕ್ಷೆ ನಡೆಯಲಿದೆ. ಒಟ್ಟು‌ 8,622 ಮಂದಿ ಪರೀಕ್ಷೆ ಬರೆಯಲು ಅರ್ಹತೆ ಪಡೆದಿದ್ದಾರೆ ಎಂದು ವಿವರಿಸಿದ್ದಾರೆ.

ಡಿ.28ರಂದು ಕೆಮಿಸ್ಟ್, ವಿವಿಧ ವಿಭಾಗಗಳ ಕಿರಿಯ ಎಂಜಿನಿಯರ್ ಹುದ್ದೆಗಳಿಗೆ ಬೆಂಗಳೂರಿನ 21 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಒಟ್ಟು 10,136 ಮಂದಿ ಪರೀಕ್ಷೆ ಬರೆಯಲಿದ್ದಾರೆ.28ರಂದು ಕನ್ನಡ ಭಾಷಾ ಪರೀಕ್ಷೆ ಕೂಡ ನಡೆಯಲಿದೆ ಎಂದು ಅವರು ಹೇಳಿದರು.


Share this with Friends

Related Post