ಬೆಂಗಳೂರು: ನೆರೆ ರಾಜ್ಯವಾದ ಕೇರಳ ಸರ್ಕಾರವು ಗಡಿ ಭಾಗದಲ್ಲಿರುವ ಕನ್ನಡ ಶಾಲೆಗಳಲ್ಲಿ ಮಲಯಾಳಂ ಮೊದಲ ಭಾಷೆಯಾಗಿಸುವ ಮಲಯಾಳಂ ಭಾಷಾ ವಿಧೇಯಕದ ವಿರುದ್ಧ ಹೋರಾಟ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ರೇಸ್ ಕೋರ್ಸ್ ರಸ್ತೆಯ ಕೆಇಬಿ ಇಂಜಿನಿಯರ್ ಅಸೋಸಿಯೇಷನ್ ನಲ್ಲಿ ನ ಕಾರ್ಯಕ್ರಮದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇರಳದ ಗಡಿ ಭಾಗಗಳ ಶಾಲೆಗಳಲ್ಲಿ ಮಲಯಾಳಂನ್ನು ಮೊದಲ ಭಾಷೆಯಾಗಿ ಕಲಿಯುವುದನ್ನು ಕಡ್ಡಾಯಗೊಳಿಸಿರುವ ಬಗ್ಗೆ ಈಗಾಗಲೇ ಕೇರಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು, ಪುನರ್ ಪರಿಶೀಲನೆಗೆ ಮನವಿ ಮಾಡಲಾಗಿದೆ ಮುಂದುವರೆದು ಕನ್ನಡ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಹೋರಾಟವನ್ನೇ ಮಾಡುತ್ತೇವೆ ಎಂದರು.
ದ್ವೇಷ ಭಾಷಣ ಮಸೂದೆಗೆ ವಿವರಣೆ:
ದ್ವೇಷ ಭಾಷಣಕ್ಕೆ ಸಂಬಂಧಿಸಿದ ಬಿಲ್ಲು ರಾಜ್ಯಪಾಲರ ಬಳಿಯೇ ಉಳಿದಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಈ ಬಗ್ಗೆ ರಾಜ್ಯಪಾಲರನ್ನು ಒಮ್ಮೆ ಭೇಟಿಯಾಗಿ ವಿವರಣೆ ನೀಡಲಾಗುವುದು ಎಂದರು. ರಾಜ್ಯದಲ್ಲಿ ಬಾಂಗ್ಲಾ ವಲಸಿಗರು ಹೆಚ್ಚಾಗಿದ್ದಾರೆ ಎಂಬ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ಹೆಸರುಗಳನ್ನು ನೀಡುವಂತೆ ಮುಖ್ಯಮಂತ್ರಿಗಳು ಹೇಳಿದರು.
ಬಿಜೆಪಿಯವರು ರಾಜ್ಯಕ್ಕೆ ಎಷ್ಟೇ ಅನ್ಯಾಯವಾದರೂ ಕೇಂದ್ರ ಸರ್ಕಾರ ಮಾಡಿದ್ದನ್ನೆಲ್ಲಾ ಸಮರ್ಥಿಸಿಕೊಳ್ಳುವುದು ಮಹಾ ತಪ್ಪು.ಬಿಜೆಪಿ ಕರ್ನಾಟಕಕ್ಕೆ ಅನ್ಯಾಯವಾದದ್ದನೆಲ್ಲ ನ್ಯಾಯ ಎನ್ನುವುದು ಮಹಾ ಅಪರಾಧ ಎಂದರು.
ನರೇಗಾ ಚರ್ಚೆಗೆ ನಾವೂ ಸಿದ್ಧ:
ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಕಾಯ್ದೆ ಕುರಿತಂತೆ ಚರ್ಚೆಗೆ ಆಹ್ವಾನಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಚರ್ಚೆಗೆ ನಾವು ಸಿದ್ಧವಾಗಿದ್ದು, ದೊಡ್ಡ ಆಂದೋಲನವನ್ನೇ ಮಾಡುತ್ತೇವೆ ಎಂದ ಸಿಎಂ ಹೆಚ್. ಡಿ.ಕುಮಾರಸ್ವಾಮಿಯವರು ಅವರ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು. ಬಿಜೆಪಿ ಜೆಡಿಎಸ್ ಅವರು ಕೇವಲ ಸುಳ್ಳು ಹೇಳುತ್ತಾರೆ ಎಂದರು.

