Mon. Dec 23rd, 2024

ಕೇರಳ ಅವಘಡ; ಸಿದ್ದರಾಮಯ್ಯ ಕಳವಳ:ನೆರವು ನೀಡಲು ಸಿದ್ದ-ಸಿಎಂ

Share this with Friends

ಬೆಂಗಳೂರು, ಜು.30: ಕೇರಳದ ವಯನಾಡ್ ನಲ್ಲಿ ಗುಡ್ಡ ಕುಸಿತದ ಪರಿಣಾಮ 80ಕ್ಕೂ ಅಧಿಕ ಜನರು ಬಲಿಯಾಗಿರುವುದಕ್ಕೆ ಸಿಎಂ ಸಿದ್ದರಾಮಯ್ಯ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

ಜತೆಗೆ ಕೇರಳಕ್ಕೆ ನಮ್ಮ ಸರ್ಕಾರ ಎಲ್ಲಾ ರೀತಿಯ ನೆರವು ನೀಡಲು ಸಿದ್ಧ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸಿದ್ದರಾಮಯ್ಯ ತಿಳಿಸಿದ್ದು ವಯನಾಡ್ ನಲ್ಲಿ ನಡೆದ ಭೀಕರ ಘಟನೆಗೆ ಆತಂಕ ಪಟ್ಟಿದ್ದಾರೆ.

ಕೇರಳದಲ್ಲಿ ಸಂಭವಿಸಿದ ಗುಡ್ಡ ಕುಸಿತ ಅವಘಡದಲ್ಲಿ 70ಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದು, ಹಲವರು ಕಣ್ಮರೆಯಾಗಿರುವ ಸುದ್ದಿ ಕೇಳಿ ಎದೆ ನಲುಗಿತು. ಇಂತಹ ಸಂಕಷ್ಟದ ಸಮಯದಲ್ಲಿ ನೆರೆಯ ಕೇರಳ ಜನರ ಜೊತೆ ನಾವು ಇರುತ್ತೇವೆ, ಕೇರಳಕ್ಕೆ ಅಗತ್ಯವಿರುವ ಎಲ್ಲಾ ನೆರವನ್ನು ನಮ್ಮ ಸರ್ಕಾರ ನೀಡಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.


Share this with Friends

Related Post