Tue. Dec 24th, 2024

ಕಳೆದ ಬಾರಿ ಖರ್ಗೆಯವರು ಸೋತಿದ್ದು ರಾಜ್ಯಕ್ಕೆ, ಜಿಲ್ಲೆಗೆ ದೊಡ್ಡ ನಷ್ಟ: ಸಿಎಂ

Share this with Friends

ಕಲ್ಬುರ್ಗಿ,ಏ.24: ಈ ಬಾರಿ ಕಲ್ಬುರ್ಗಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ಅವರು ಗೆಲ್ಲುವುದು ನೂರಕ್ಕೆ ನೂರು ಸತ್ಯ ಎಂದು ಸಿಎಂ ಸಿದ್ದರಾಮಯ್ಯ ಭವಿಷ್ಯ ನುಡಿದರು.

ಕಾಂಗ್ರೆಸ್ ಪಕ್ಷದ ಲೋಕಸಭಾ ಅಭ್ಯರ್ಥಿ ರಾಧಾಕೃಷ್ಣ ಅವರ ಪರ ಏರ್ಪಡಿಸಿದ್ದ ಬೃಹತ್ ಜನಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಲ್ಬುರ್ಗಿ ಲೋಕಸಭಾ ಕ್ಷೇತ್ರದಲ್ಲಿ ಕಳೆದ ಬಾರಿ ಮಲ್ಲಿಕಾರ್ಜುನ ಖರ್ಗೆಯವರು ಸೋತಿದ್ದರಿಂದ ಅವರಿಗೆ ಹೆಚ್ಚು ನಷ್ಟ ಆಗಲಿಲ್ಲ. ಇವರ ಸೋಲಿನಿಂದ ರಾಜ್ಯಕ್ಕೆ ಮತ್ತು ಜಿಲ್ಲೆಗೆ ಬಹಳ ದೊಡ್ಡ ನಷ್ಟವಾಗಿದೆ. ಈ ಬಾರಿ ಮತ್ತೆ ತಪ್ಪಾಗಬಾರದು. ಅಭಿವೃದ್ಧಿ ಪರವಾಗಿರುವ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿ ಎಂದು ಕರೆ ನೀಡಿದರು.

371ಜೆ ಜಾರಿ ಆಗಲು ಮಲ್ಲಿಕಾರ್ಜುನ ಖರ್ಗೆ ಪ್ರಮುಖ ಕಾರಣ, ಇವರ ಹೋರಾಟ, ಶ್ರಮದಿಂದಾಗಿ ಈ ಭಾಗಕ್ಕೆ 371ಜೆ ಜಾರಿಯಾಗಿ ಲಕ್ಷಾಂತರ ಕುಟುಂಬಗಳಿಗೆ ದೊಡ್ಡ ಮಟ್ಟದ ವರದನವಾಗಿದೆ ಎಂದು ಸಿಎಂ ಹೇಳಿದರು.

ಮೋದಿಯವರು ಹತ್ತು ವರ್ಷ ಪ್ರಧಾನಿಯಾಗಿ ಬಡ, ಮಧ್ಯಮ ವರ್ಗದ ಭಾರತೀಯರ ಪ್ರಗತಿಗಾಗಿ, ಏಳಿಗೆಗಾಗಿ ಒಂದೇ ಒಂದು ಕಾರ್ಯಕ್ರಮವನ್ನು ಜಾರಿ ಮಾಡಿದ ಉದಾಹರಣೆ ಇದ್ದರೆ ತೋರಿಸಿ ಎಂದು ಸವಾಲು ಹಾಕಿದರು.

ನಮ್ಮ ಗ್ಯಾರಂಟಿಗಳನ್ನು ಕದ್ದಿರುವ ಮೋದಿ ಮತ್ತು ಟೀಮು ಪರಮ ಸುಳ್ಳುಗಾರರು ಎನ್ನುವುದು ದೇಶದ ಪ್ರತಿಯೊಬ್ಬರಿಗೂ ಅರ್ಥವಾಗಿದೆ. ಬಿಜೆಪಿ ಸುಳ್ಳಿನ ಕಾರ್ಖಾನೆ ಆಗಿದೆ ಎಂದು ಸಿದ್ದರಾಮಯ್ಯ ಟೀಕಾಪ್ರಹಾರ ನಡೆಸಿದರು.

ಕಲ್ಬುರ್ಗಿ ಮತ್ತು ರಾಜ್ಯಕ್ಕೆ ಆದ ಅನ್ಯಾಯದ ಬಗ್ಗೆ ಒಂದು ದಿನವೂ ಬಾಯಿ ಬಿಡದ ಬಿಜೆಪಿ ಸಂಸದರನ್ನು ಈ ಬಾರಿ ಸೋಲಿಸಿ ಎಂದು ಸಿಎಂ ಹೇಳಿದರು


Share this with Friends

Related Post