Sun. Nov 22nd, 2026

ಕಿಚ್ಚ ಸುದೀಪ್ – ಜೋಗಿ ಪ್ರೇಮ್ ಕಾಂಬಿನೇಷನ್ ಸಿನಿಮಾದ ‘ಟೈಟಲ್ ಟೀಸರ್’ ಬಿಡುಗಡೆಗೆ ಮುಹೂರ್ತ ಫಿಕ್ಸ್; ನ.27ರಂದು ಒರಾಯನ್ ಮಾಲ್‌ನಲ್ಲಿ ಅದ್ಧೂರಿ ಕಾರ್ಯಕ್ರಮ

Share this with Friends

ಬೆಂಗಳೂರು: ಸ್ಯಾಂಡಲ್‌ವುಡ್‌ನ ಬಹುನಿರೀಕ್ಷಿತ ‘ಕಿಚ್ಚ’ ಸುದೀಪ್ ಹಾಗೂ ನಿರ್ದೇಶಕ ‘ಜೋಗಿ’ ಪ್ರೇಮ್ ಕಾಂಬಿನೇಷನ್‌ನ ಹೊಸ ಸಿನಿಮಾದ ಟೈಟಲ್ ಟೀಸರ್ ಬಿಡುಗಡೆಗೆ ಮುಹೂರ್ತ ನಿಗದಿಯಾಗಿದೆ. ಇದೇ ನವೆಂಬರ್ 27ರಂದು ಸಂಜೆ 6 ಗಂಟೆಗೆ ಬೆಂಗಳೂರಿನ ಒರಾಯನ್ ಮಾಲ್‌ನಲ್ಲಿ ಅದ್ಧೂರಿಯಾಗಿ ಚಿತ್ರದ ಶೀರ್ಷಿಕೆ ಮತ್ತು ಟೀಸರ್ ಅನಾವರಣಗೊಳ್ಳಲಿದೆ.

ಈ ಕುರಿತು ಸ್ವತಃ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಚಿತ್ರದ ವಿಶೇಷ ಪೋಸ್ಟರ್ ಒಂದನ್ನು ಹಂಚಿಕೊಂಡು ಅಧಿಕೃತ ಮಾಹಿತಿ ನೀಡಿದ್ದಾರೆ. “ನವೆಂಬರ್ 27ರಂದು ಸಂಜೆ 6 ಗಂಟೆಗೆ ಒರಾಯನ್ ಮಾಲ್‌ನಲ್ಲಿ ಸಿಗೋಣ” ಎಂದು ಬರೆದುಕೊಳ್ಳುವ ಮೂಲಕ ಸುದೀಪ್ ತಮ್ಮ ಅಭಿಮಾನಿಗಳಿಗೆ ಪ್ರೀತಿಯ ಆಹ್ವಾನ ನೀಡಿದ್ದಾರೆ.

ಚಿತ್ರತಂಡ ಬಿಡುಗಡೆ ಮಾಡಿರುವ ಹೊಸ ಪೋಸ್ಟರ್ ಸಖತ್ ಕುತೂಹಲ ಮೂಡಿಸಿದ್ದು, ಭಾರತೀಯ ಪಾಸ್‌ಪೋರ್ಟ್ ಮೇಲೆ ಹೃದಯದ ಆಕಾರದ (Heart-shaped) ಕೆಂಪು ಬಣ್ಣದ ಕೂಲಿಂಗ್ ಗ್ಲಾಸ್ ಇರುವ ವಿನ್ಯಾಸವು ಸಿನಿಮಾದ ಕಥಾಹಂದರದ ಬಗ್ಗೆ ಅಭಿಮಾನಿಗಳಲ್ಲಿ ಭಾರಿ ನಿರೀಕ್ಷೆ ಹುಟ್ಟುಹಾಕಿದೆ. ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್‌ನಲ್ಲೂ ಟೀಸರ್ ಬಿಡುಗಡೆಯಾಗಲಿದ್ದು, ‘ದಿ ವಿಲನ್’ ಚಿತ್ರದ ಬಳಿಕ ಸುದೀಪ್ ಮತ್ತು ಪ್ರೇಮ್ ಮತ್ತೊಮ್ಮೆ ಒಂದಾಗಿರುವುದು ಸಿನಿರಸಿಕರಲ್ಲಿ ಸಂಭ್ರಮ ಹೆಚ್ಚಿಸಿದೆ.

 


Share this with Friends

Related Post