Tue. Dec 24th, 2024

ಕೃಪಾಕರ,ಸೇನಾನಿಚುನಾವಣಾ ರಾಯಭಾರಿಗಳಾಗಿ ನೇಮಕ

Share this with Friends

ಮೈಸೂರು,ಮಾ.26:ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಮಾಡುವ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಹಲವು ಗಣ್ಯರನ್ನು ರಾಯಭಾರಿಗಳನ್ನಾಗಿ ಆಯ್ಕೆ ಮಾಡಲಾಗಿದೆ.

ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಚುನಾವಣಾ ಭಾಗವಹಿಸುವಿಕೆ (ಸ್ವೀಪ್) ಅಡಿಯಲ್ಲಿ ಮತದಾರರಲ್ಲಿ ಮತದಾನ ಮಾಡುವ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಮೈಸೂರು ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ವ್ಯಕ್ತಿಗಳನ್ನು ಮುಖ್ಯ ಚುನಾವಣಾಧಿಕಾರಿಗಳು ರಾಯಭಾರಿಗಳನ್ನಾಗಿ ಆಯ್ಕೆ ಮಾಡಿದ್ದಾರೆ.

ಮಾಡೆಲಿಂಗ್ ಕ್ಷೇತ್ರದ ತನಿಷ್ಕಾ ಮೂರ್ತಿ, ಅಂತಾರಾಷ್ಟ್ರೀಯ ವನ್ಯಜೀವಿ ಛಾಯಚಿತ್ರಗಾರರಾದ ಬಿ.ಎಸ್.ಕೃಪಾಕರ್ ಹಾಗೂ ಕೆ.ಸೇನಾನಿ ಅವರನ್ನು ಚುನಾವಣಾ ರಾಯಭಾರಿಗಳನ್ನಾಗಿ ಆಯ್ಕೆ ಮಾಡಲಾಗಿದೆ.

ಇವರುಗಳು ಜಿಲ್ಲಾಡಳಿತದ ವತಿಯಿಂದ ಕೈಗೊಳ್ಳುವ ಮತದಾನ ಜಾಗೃತಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ಮತದಾರರಲ್ಲಿ ಅರಿವು ಮೂಡಿಸಲು ಜಿಲ್ಲಾಡಳಿತದೊಂದಿಗೆ ಕೈಜೋಡಿಸಲಿದ್ದಾರೆ ಎಂದು ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರಾದ ಕೆ.ಎಂ.ಗಾಯತ್ರಿ ಅವರು ತಿಳಿಸಿದ್ದಾರೆ.


Share this with Friends

Related Post