Sat. Nov 21st, 2026

ಕೆಸೆಟ್-2026: ತಾತ್ಕಾಲಿಕ ಫಲಿತಾಂಶ ಪ್ರಕಟ; 8,171 ಅಭ್ಯರ್ಥಿಗಳು ತೇರ್ಗಡೆ

Share this with Friends

ಬೆಂಗಳೂರು: ರಾಜ್ಯದ ಪದವಿ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನಡೆಯುವ ಅರ್ಹತಾ ಪರೀಕ್ಷೆಯ (ಕೆಸೆಟ್-26) ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಪ್ರಕಟಿಸಿದೆ.

ಕಳೆದ ಅಕ್ಟೋಬರ್ 11ರಂದು ಒಟ್ಟು 37 ವಿಷಯಗಳಿಗೆ ನಡೆದಿದ್ದ ಈ ಪರೀಕ್ಷೆಗೆ 1,29,214 ಮಂದಿ ನೋಂದಾಯಿಸಿಕೊಂಡಿದ್ದರು. ಈ ಪೈಕಿ 1,17,638 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಅಂತಿಮವಾಗಿ ವಿವಿಧ ಪ್ರವರ್ಗಗಳಡಿ ಲಭ್ಯವಿದ್ದ 7,204 ಸ್ಥಾನಗಳಿಗೆ ಒಟ್ಟು 8,171 ಅಭ್ಯರ್ಥಿಗಳು ಅರ್ಹತೆ ಗಿಟ್ಟಿಸಿಕೊಂಡಿದ್ದಾರೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ಪರೀಕ್ಷೆಯ ಎರಡೂ ಪತ್ರಿಕೆಗಳಿಗೆ ಹಾಜರಾದ ಒಟ್ಟು ಅಭ್ಯರ್ಥಿಗಳ ಸಂಖ್ಯೆಯಲ್ಲಿ ಶೇ. 6ರಷ್ಟು ಮಂದಿಯನ್ನು ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅರ್ಹರೆಂದು ಪರಿಗಣಿಸಲಾಗಿದೆ. ಎಲ್ಲಾ 37 ವಿಷಯಗಳ ಕಟ್-ಆಫ್ ಅಂಕಗಳು ಹಾಗೂ ಅರ್ಹತೆ ಪಡೆದವರ ನೋಂದಣಿ ಸಂಖ್ಯೆಯ ವಿವರಗಳನ್ನು ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗಿದ್ದು, ಅರ್ಹ ಅಭ್ಯರ್ಥಿಗಳಿಗೆ ಶೀಘ್ರದಲ್ಲೇ ಅರ್ಹತಾ ಪ್ರಮಾಣಪತ್ರಗಳನ್ನು ವಿತರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

 


Share this with Friends

Related Post