Sat. Nov 2nd, 2024

ಕೆಎಸ್ಆರ್‌ಟಿಸಿ ಟಿಕೆಟ್‌ ದರ‌ ಹೆಚ್ಚಳ ಪ್ರಸ್ತಾವನೆ ಇಲ್ಲಾ:ಸಿಎಂ ಸಿದ್ದರಾಮಯ್ಯ

Share this with Friends

ಬಳ್ಳಾರಿ,(ತೋರಣಗಲ್ಲು) ಜೂ.20: ಗ್ಯಾರಂಟಿಗಳಿಗೆ 60,000 ಕೋಟಿ ಈ ವರ್ಷ ಒದಗಿಸಬೇಕು. ಅಭಿವೃದ್ಧಿ ಕೆಲಸಗಳಿಗೆ ಸಂಪನ್ಮೂಲಗಳನ್ನು ಕ್ರೋಢೀಕರಿಸಬೇಕೋ ಬೇಡವೋ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.

ಅವರು ತೋರಣಗಲ್ಲಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ,ಬಿಜೆಪಿಯವರು ಗ್ಯಾರಂಟಿಗಳನ್ನು ರದ್ದು ಮಾಡಲು ಹೇಳಲಿ,ಹೇಳುತ್ತಾರೆಯೇ ಎಂದು ಪ್ರಶ್ನಿಸಿದರು.

ಡೀಸಲ್ ಪೆಟ್ರೋಲ್ ದರ ಹೆಚ್ಚಳವಾಗಿರುವುದರಿಂದ ಸಾರಿಗೆ ದರ ಹೆಚ್ಚಿಸಲಾಗತ್ತದೆ ಎಂದು ಪ್ರತಿಪಕ್ಷದವರು ಹೇಳುತ್ತಿದ್ದಾರಲ್ಲಾ ಪ್ರಶ್ನೆಗೆ, ಕೆ.ಎಸ್.ಆರ್.ಟಿ.ಸಿ ಟಿಕೆಟ್ ದರಗಳನ್ನು ಹೆಚ್ಚಿಸುವ ಪ್ರಸ್ತಾವನೆ ನಮ್ಮ ಮುಂದಿಲ್ಲ ಎಂದು ಸ್ಪಷ್ಟಪಡಿಸಿದರು.

ನರೇಂದ್ರ ಮೋದಿಯವರು ಇದ್ದಾಗ ಒಂದು ಲೀಟರ್ ಪೆಟ್ರೋಲ್ ಬೆಲೆ 72 ರೂ.ಗಳಾಗಿತ್ತು. ಇಂದು 102 ರೂ.ಗಳಾಗಲು ಯಾರು ಕಾರಣ. ಒಂದು ಕಡೆ ಕಚ್ಛಾತೈಲದ ಬೆಲೆ ಕಡಿಮೆಯಾಗಿದ್ದರೆ, ಮತ್ತೊಂದೆಡೆ ಪೆಟ್ರೋಲ್ ಬೆಲೆ ಹೆಚ್ಚು ಮಾಡಲಾಗಿದೆ. ಮನ್ಮೋಹನ್ ಸಿಂಗ್ ಅವರು ಇದ್ದಾಗ 103 ಕಚ್ಛಾತೈಲದ ಬೆಲೆ ಡಾಲರ್ ಬೆಲೆ ಇದ್ದಾಗ ಸಹಾಯಧನವನ್ನೂ ನೀಡಿ ಪೆಟ್ರೋಲ್ ಬೆಲೆಯನ್ನೂ ಇಳಿಸಿದ್ದರು. ನರೇಂದ್ರ ಮೋದಿಯವರ ಕಾಲದಲ್ಲಿ ಹೆಚ್ಚಾಗಿದೆ ಎಂದು ಸಿದ್ದು ಟಾಂಗ್ ನೀಡಿದರು.

ನಾವು ಬೆಲೆಏರಿಕೆ ಮಾಡಿರುವುದು ಅಭಿವೃದ್ಧಿಗಾಗಿ, ಡೀಸಲ್ ಪೆಟ್ರೋಲ್ ಮೇಲೆ 3. ರೂ ಹೆಚ್ಚು ಮಾಡಿದರೂ ನೆರೆಯ ರಾಜ್ಯಗಳಿಗಿಂತಲೂ ಕಡಿಮೆ ಬೆಲೆ ಇದೆ. ವಾಹನ ಸಂಚಾರ ಹಾಗೂ ಪೆಟ್ರೋಲ್ ಡೀಸಲ್ ಹಾಕಿಸಿಕೊಳ್ಳುವುದು ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ವಾಹನಗಳು ಹೋಗಬಾರದು ಎಂಬ ಕಾರಣಕ್ಕಾಗಿ ಎಂದು ಸಮರ್ಥಿಸಿಕೊಂಡರು.

ಸಂಡೂರಿನಲ್ಲಿ ಗಣಿಗಾರಿಕೆ ಮಾಡಲು ಪರಿಸರಪ್ರೇಮಿಗಳು ವಿರೋಧ ಮಾಡುತ್ತಿರುವ ಬಗ್ಗೆ ಮಾತನಾಡಿ ಕೇಂದ್ರ ಸಚಿವ ಹೆಚ್.ಡಿ .ಕುಮಾರಸ್ವಾಮಿಯವರನ್ನು ಕೇಳಿ,ಒಂದು ಕಾಲದಲ್ಲಿ ಅವರೇ ವಿರೋಧಿಸಿ ಈಗ ಅವರೇ ಗಣಿಗಾರಿಕೆ ಮಾಡಿ ಎನ್ನುತ್ತಿದ್ದಾರೆ ಎಂದು ಟೀಕಿಸಿದರು.

ಅಂಗನವಾಡಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಸಂಬಂಧಿಸಿದಂತೆ ಎರಡೂ ಇಲಾಖೆಗಳು ಸಭೆ ಸೇರಿ ಪರಿಹಾರವನ್ನು ಕಂಡುಕೊಳ್ಳಬೇಕು ಎಂದು ಸೂಚಿಸಲಾಗಿದೆ ಸೋಮವಾರ ಇದಕ್ಕೆ ಸಂಬಂಧಿಸಿದಂತೆ ಸಭೆ ಕರೆಯಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು.


Share this with Friends

Related Post