Sat. Apr 12th, 2025

ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿ ಬೆಂಗಳೂರಿಗೆ ವಾಪಸ್ಸಾದ ಕುಮಾರಸ್ವಾಮಿ

Kumaraswamy
Share this with Friends

ಬೆಂಗಳೂರು, ಮಾ.24 : ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಅವರು ಚೆನ್ನೈ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ. ಹೃದಯದ ಶಸ್ತ್ರಚಿಕಿತ್ಸೆಗಾಗಿ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದ ಕುಮಾರಸ್ವಾಮಿ ಇಂದು ವಿಶೇಷ ವಿಮಾನದ ಮೂಲಕ ಚೆನ್ನೈನಿಂದ ಬೆಂಗಳೂರಿನ ಹೆಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.

ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಎಚ್​ಡಿಕೆ, ಇದೊಂದು ಪುನರ್ಜನ್ಮ ಎಂದೇ ಹೇಳಬಹುದು. ನಾಡಿನಾದ್ಯಂತ ಅಭಿಮಾನಿಗಳು ಪ್ರಾರ್ಥನೆಯನ್ನ ಸಲ್ಲಿಸಿದ್ರು. ಅಭಿಮಾನಿಗಳು, ಹಿತೈಷಿಗಳ ಪ್ರಾರ್ಥನೆ ಫಲ ಕೊಟ್ಟಿದೆ. ಸಾಯಿ ಬಾಬಾ ಬಂದು ಆಪರೇಷನ್​ ಮಾಡಿದ್ದಾರೆ ಅಂದ್ರು. ಸ್ವತಃ ವೈದ್ಯರೇ ಆ ಮಾತನ್ನು ಹೇಳಿದ್ದಾರೆ. ಇನ್ನು ಮೂರ್ನಾಲ್ಕು ದಿನಗಳ ಕಾಲ ವಿಶ್ರಾಂತಿ ಮಾಡುತ್ತೇನೆ ಎಂದು ಹೇಳಿದರು.

ಎರಡು ಬಾರಿ ಲೋಪದೋಷ ಆಗಿತ್ತು. ಭಗವಂತ ಕಾಪಾಡಿದ್ದಾನೆ. ಮೂರನೇ ಬಾರಿ ಹೃದಯ ಶಸ್ತ್ರ ಚಿಕಿತ್ಸೆ ಆಗಿದೆ. ಮನುಷ್ಯ ಹಲವಾರು ರೀತಿ ತಾಂತ್ರಿಕವಾಗಿ ಮುಂದುವರೆದಿದ್ದಾರೆ. ನಾಡಿನಾದ್ಯಂತ ಅಭಿಮಾನಿ ಹಿತೈಷಿಗಳು ದೇವರಿಗೆ ಪ್ರಾರ್ಥನೆ ಮಾಡಿದಾರೆ. ಅವರ ಪ್ರಾರ್ಥನೆ ಫಲ ಕೊಟ್ಟಿದೆ. ವೈದ್ಯರು ಸುಧೀರ್ಘವಾಗಿ ಚರ್ಚೆ ಮಾಡಿದ್ದಾರೆ. ವೈದ್ಯರು ಸಾಯಿಬಾಬಾ ಭಕ್ತರು. ಸಾಯಿಬಾಬನಿಗೆ ಪೂಜೆ ಸಲ್ಲಿಸಿ ಬಂದು ಶಸ್ತ್ರ ಚಿಕಿತ್ಸೆ ಮಾಡಿದ್ದಾರೆ. ಮತ್ತೊರ್ವ ವೈದ್ಯ ಹಂಗೇರಿಯಾದವರು ನನಗೆ ಮರುಜನ್ಮ ನೀಡಿದ್ದಾರೆ. ನನ್ನ ಕೈಲಾದ ರೀತಿ ಚುನಾವಣೆ ಪ್ರಚಾರದಲ್ಲಿ ತೊಡಗುತ್ತೇನೆಎಂದು ಸ್ಪಷ್ಟಪಡಿಸಿದರು.


Share this with Friends

Related Post