Sat. Apr 19th, 2025

ವಯನಾಡಿನಲ್ಲಿ ಭೂಕುಸಿತ:30 ಮಂದಿ ಸಾವು-ಮೋದಿ‌ ಕಳವಳ

Share this with Friends

ವಯನಾಡ್,ಜು.30: ಕೇರಳದ ವಯನಾಡಿನಲ್ಲಿ ಹಲವು ಬಾರಿ ಭೂಕುಸಿತ ಉಂಟಾಗಿ 30 ಮಂದಿ ಮೃತಪಟ್ಟಿದ್ದಾರೆ.

ರಕ್ಷಣಾ ಕಾರ್ಯ ಭರದಿಂದ ಸಾಗಿದ್ದು,ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ.

ಈ ಘಟನೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ಕಳವಳ ವ್ಯಕ್ತಪಡಿಸಿದ್ದು,ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಬಳಿ ಮಾತನಾಡಿ ಮಾಹಿತಿ ಪಡೆದಿದ್ದಾರೆ.

ಕೇಂದ್ರದಿಂದ ಸಾಧ್ಯವಾಗುವ ಎಲ್ಲಾ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ ಜತೆಗೆ
ಪ್ರಧಾನ ಮಂತ್ರಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ.


Share this with Friends

Related Post