Mon. Dec 23rd, 2024

ಮೋದಿಯವರ ಹಾದಿಯಲ್ಲಿ ಸಾಗೋಣ:ಎಲ್.ನಾಗೇಂದ್ರ ಕರೆ

Share this with Friends

ಮೈಸೂರು: ಪಕ್ಷಕ್ಕಾಗಿ ದೇಶಕ್ಕಾಗಿ ತಮ್ಮ ಸರ್ವಸ್ವವನ್ನು ಅರ್ಪಿಸಿ ಕೆಲಸ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರ ಹಾದಿಯಲ್ಲಿ ಸಾಗೋಣ ಎಂದು
ಬಿಜೆಪಿ ನಗರ ಅಧ್ಯಕ್ಷ ಎಲ್. ನಾಗೇಂದ್ರ ಕರೆ ನೀಡಿದರು.

ನಗರದ ಜೀವದಾರ ರಕ್ತ ನಿಧಿ ಕೇಂದ್ರದ ಆವರಣದಲ್ಲಿ ಬಿಜೆಪಿ ವೈದ್ಯಕೀಯ ಪ್ರಕೋಸ್ಟ ಮತ್ತು ನರೇಂದ್ರ ಮೋದಿ ಅಭಿಮಾನಿ ಬಳಗ ಮೋದಿಯವರ ಹುಟ್ಟುಹಬ್ಬ ಪ್ರಯುಕ್ತ ಆಯೋಜಿಸಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರದ ಚಹಾ ವಿತರಿಸಿ ನಾಗೇಂದ್ರ ಮಾತನಾಡಿದರು.

ಪ್ರತಿದಿನ 18 ಗಂಟೆಗಳ ಕಾಲ ದೇಶ ಸೇವೆ ಸಲ್ಲಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ದಿನದಂದು ದೇಶದ ಯುವಕರು ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡುವ ಮೂಲಕ ಪ್ರಧಾನಿಯವರಿಗೆ ಮತ್ತಷ್ಟು ಹುರುಪು ತುಂಬುವ ಕೆಲಸ ಮಾಡಿದ್ದಾರೆ ಎಂದು ನಾಗೇಂದ್ರ ಮೆಚ್ಚುಗೆ ವ್ಯಕ್ತಪಡಿಸಿದರು.

30ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಸ್ವಯಂ ಪ್ರೇರಿತ ರಕ್ತದಾನ ಮಾಡಿದರು.

ಪ್ರಧಾನ ಕಾರ್ಯದರ್ಶಿ ಬಿ ಎಂ ರಘು, ಮಹಿಳಾ ಮೋರ್ಚಾ ಅಧ್ಯಕ್ಷರಾದ ರೇಣುಕಾ ರಾಜ್, ಬಿಜೆಪಿ ವೈದ್ಯಕೀಯ ಪ್ರಕೋಸ್ಟ ಸಂಚಾಲಕರಾದ ಗಿರೀಶ್, ಚಾಮರಾಜ ಕ್ಷೇತ್ರದ ಅಧ್ಯಕ್ಷ ದಿನೇಶ್ ಗೌಡ, ಪ್ರಧಾನ ಕಾರ್ಯದರ್ಶಿ ದಾಸ್ ಪ್ರಕಾಶ್, ನಗರಪಾಲಿಕೆ ಮಾಜಿ ಸದಸ್ಯರಾದ ರಂಗಸ್ವಾಮಿ ಮತ್ತಿತರರು ಹಾಜರಿದ್ದರು.


Share this with Friends

Related Post