Thu. Apr 3rd, 2025

ರಾಜ್ಯದ‌ 30 ಕಡೆಗಳಲ್ಲಿ ಲೋಕಾಯುಕ್ತ ದಾಳಿ

Share this with Friends

ಬೆಂಗಳೂರು,ಜು.19: ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ನೀಡಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ 30 ಕಡೆ ದಾಳಿ ನಡೆದಿದೆ.

ತುಮಕೂರಿನ ವಾಣಿಜ್ಯ ಇಲಾಖೆ ಹೆಚ್ಚುವರಿ ನಿರ್ದೇಶಕ ಮುದ್ದುಕುಮಾರ್, ಯಾದಗಿರಿ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಬಲವಂತ್ ರಾಥೋಡ್, ದೊಡ್ಡಬಳ್ಳಾಪುರದ ಪಶು ಆಸ್ಪತ್ರೆ ವೈದ್ಯಾಧಿಕಾರಿ ಆರ್.ಸಿದ್ದಪ್ಪ, ಹೆಬ್ಬಗೋಡಿ ನಗರಸಭೆ ಆಯುಕ್ತ ಕೆ.ನರಸಿಂಹ ಮೂರ್ತಿ, ಬೆಂಗಳೂರಿನ ಕೆಐಡಿಬಿ ಅಧಿಕಾರಿ ಬಿ.ವಿ.ರಾಜಾ, ಕಮರ್ಷಿಯಲ್ ಟ್ಯಾಕ್ಸ್ ಜಂಟಿ ಆಯುಕ್ತ ರಮೇಶ್ ಕುಮಾರ್,
ಬೆಂಗಳೂರು ಕಾನೂನು ಮಾಪನ ಇಲಾಖೆ ಡೆಪ್ಯುಟಿ ಕಂಟ್ರೋಲರ್ ಅಖ್ತರ್ ಅಲಿ, ಭದ್ರಾವತಿ ಅಂತರಗಂಗೆ ಗ್ರಾಮ ಪಂಚಾಯತಿ ಅಧ್ಯಕ್ಷ ಬಿ.ಎಸ್.ನಾಗೇಶ್, ಶಿವಮೊಗ್ಗದ ತೋಟಗಾರಿಕೆ ಇಲಾಖೆಯ ಡೆಪ್ಯುಟಿ ಡೈರೆಕ್ಟರ್ ಪ್ರಕಾಶ್, ಮಂಡ್ಯ ಕಾರ್ಮಿಕ ಅಧಿಕಾರಿ ಚೇತನ್ ಕುಮಾರ್, ಮಂಗಳೂರಿನ ಮಹಾನಗರ ಪಾಲಿಕೆ ಆಯುಕ್ತ ಆನಂದ್ ಸಿ.ಎಲ್, ಬೆಂಗಳೂರು ಉತ್ತರ ಉಪವಿಭಾಗದ ಎಫ್‌ಡಿಎ ಟಿ.ಆರ್. ಮಂಜುನಾಥ್ ಅವರುಗಳ ಮನೆಗಳ ಮೇಲೆ ನೂರಕ್ಕೂ ಹೆಚ್ಚು ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.


Share this with Friends

Related Post