Wed. Jan 8th, 2025

ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ

Share this with Friends

ಬೆಂಗಳೂರು: ಆದಾಯಕ್ಕೂ ಮೀರಿ ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ರಾಯಚೂರು, ಚಿಕ್ಕಮಗಳೂರು, ಬೀದರ್, ಬೆಳಗಾವಿ, ಗದಗ, ಬಳ್ಳಾರಿ, ಮತ್ತು ಬೆಂಗಳೂರಿನಲ್ಲಿ ಒಟ್ಟು 8 ಅಧಿಕಾರಿಗಳ ಮನೆಗಳ ಮೇಲೆ ದಾಳಿ ಮಾಡಲಾಗಿದೆ.

ಬೆಂಗಳೂರಿನಲ್ಲಿ ಸಾರಿಗೆ ಇಲಾಖೆ ಜಂಟಿ ನಿರ್ದೇಶಕಿ ಶೋಭಾ, ಚಿಕ್ಕಮಗಳೂರು ಜಿಲ್ಲೆ ಕಡೂರಿನ ಆಡಳಿತ ವೈದ್ಯಾಧಿಕಾರಿ ಡಾ. ಎಸ್.ಎನ್ ಉಮೇಶ್ ನಿವಾಸಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ.

ಬೀದರ್ ಜಿಲ್ಲೆಯ ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ ರವೀಂದ್ರ, ಬೆಳಗಾವಿ ಜಿಲ್ಲೆಯ ಖಾನಾಪುರದ ತಹಶೀಲ್ದಾರ್ ಪ್ರಕಾಶ್ ಶ್ರೀಧರ್, ತುಮಕೂರಿನ ನಿವೃತ್ತ ಆರ್​ಟಿಒ ಅಧಿಕಾರಿ ಎಸ್.ರಾಜು, ಗದಗ-ಬೆಟಗೇರಿ ನಗರಸಭೆ ಎಇಇ ಆರ್​.ಎಚ್ ಹುಚ್ಚೇಶ್ ಮನೆ ಮೇಲೆ ದಾಳಿ‌‌ ನಡೆದಿದೆ.

ಬಳ್ಳಾರಿ ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಮನೆ, ರಾಯಚೂರು ಜಿಲ್ಲೆಯ ಬೆಸ್ಕಾಂ ಜೆಇ ಹುಲಿರಾಜ್ ಮನೆ ಮೇಲೂ ದಾಳಿ ಮಾಡಿ ದಾಖಲೆಗಳನ್ನು ‌ಪರಿಶೀಲಿಸಲಾಗುತ್ತಿದೆ.

ಗದಗ ಬೆಟಗೇರಿ ನಗರಸಭೆಯ ಕಾರ್ಯನಿರ್ವಾಹಕ ಇಂಜಿನಿಯರ್ ಹುಚ್ಚೇಶ್ ಬಂಡಿವಡ್ಡರ್​‌ ಅವರ ಮನೆ ಮತ್ತು ನಗರಸಭೆ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಗದಗ, ಗಜೇಂದ್ರಗಡ, ಬಾಗಲಕೋಟೆ ಸೇರಿದಂತೆ ಒಟ್ಟು ಐದು ಕಡೆ ದಾಳಿ ನಡೆದಿದೆ.

ಲೋಕಾಯುಕ್ತ ಎಸ್​ಪಿ ಹನಮಂತರಾಯ್, ಡಿವೈಎಸ್​ಪಿ ವಿಜಯ್ ಬಿರಾದಾರ್, ಪಿಎಸ್​ಐ ಎಸ್. ಎಸ್ ತೇಲಿ ಸೇರಿದಂತೆ ಲೋಕಾಯುಕ್ತ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ ಭಾಗಿಯಾಗಿದ್ದಾರೆ.


Share this with Friends

Related Post