Mon. Dec 23rd, 2024

ಕಳೆದುಹೋದ ಐಫೋನ್,ಪರ್ಸ್:ಕೆಲವೇ ಗಂಟೆಯಲ್ಲಿ ಪತ್ತೆ ಹಚ್ಚಿದ ಲಷ್ಕರ್ ಪೊಲೀಸ್

Share this with Friends

ಮೈಸೂರು,ಮೇ.1: ಪ್ರಯಾಣಿಕರೊಬ್ಬರು ಕಳೆದುಕೊಂಡ ಬೆಲೆ ಬಾಳುವ ಐಫೋನ್ ಹಾಗೂ ಪರ್ಸ್ ಅನ್ನು ಕೆಲವೇ ಗಂಟೆಗಳಲ್ಲಿ ಪತ್ತೆ ಹಚ್ಚುವಲ್ಲಿ ಲಷ್ಕರ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಬೆಂಗಳೂರಿನ ಇಂದಿರಾನಗರ ನಿವಾಸಿ ಲೇಖಾ ಎಂಬುವರು ಮಂಗಳವಾರ ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ತಮ್ಮ ಮೊಬೈಲ್ ಹಾಗೂ ಪರ್ಸ್ ಕಳೆದುಕೊಂಡಿದ್ದರು.ಈ ಸಂಭಂಧ ಲಷ್ಕರ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ತಕ್ಷಣ ಇನ್ಸ್ ಪೆಕ್ಟರ್ ಸಲೀಂ ಅಬ್ಬಾಸ್ ನೇತೃತ್ವದಲ್ಲಿ ಸಿಬ್ಬಂದಿಗಳಾದ ಕಿರಣ್,ಚಿನ್ನಪ್ಪ ಮತ್ತು ಚೇತನ್ ರವರು ಬಸ್ ನಿಲ್ದಾಣದ ಸಿಬ್ಬಂದಿಗಳ ಸಹಯೋಗದೊಂದಿಗೆ ಕೆಲವೇ ಗಂಟೆಗಳಲ್ಲಿ ಪತ್ತೆಹಚ್ಚಿ,ಮೊಬೈಲ್ ಫೋನ್ ಹಾಗೂ ಪರ್ಸ್ ನ್ನ ವಾರಸುದಾರರಿಗೆ ಹಿಂದಿರುಗಿಸಿದ್ದಾರೆ.

ಲಷ್ಕರ್ ಠಾಣೆಯ ಕಾರ್ಯಾಚರಣೆಯನ್ನ ನಗರ ಪೊಲೀಸ್ ಆಯುಕ್ತ ಡಾ.ಬಿ.ರಮೇಶ್,ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಮುತ್ತುರಾಜ್, ಅಪರಾಧ ಮತ್ತು ಸಂಚಾರ ಡಿಸಿಪಿ ಜಾಹ್ನವಿ ಹಾಗೂ ಎಸಿಪಿ ಶಾಂತಮಲ್ಲಪ್ಪ ಅವರು ಶ್ಲಾಘಿಸಿದ್ದಾರೆ.


Share this with Friends

Related Post