ಬೆಂಗಳೂರು. ಎ.1 : ಹೊಸ ಆರ್ಥಿಕ ವರ್ಷದ ಮೊದಲ ದಿನವೇ ತೈಲ ಮಾರುಕಟ್ಟೆ ಕಂಪನಿಗಳು ಗ್ರಾಹಕರಿಗೆ ದೊಡ್ಡ ಪರಿಹಾರವನ್ನು ನೀಡಿದ್ದು, ವಾಣಿಜ್ಯ ಸಿಲಿಂಡರ್ ಮತ್ತು 5ಕೆಜಿ ಎಫ್‌ಟಿಎಲ್ ತೈಲ ಕಂಪನಿಗಳು 19 ಕೆಜಿ ವಾಣಿಜ್ಯ ಮತ್ತು 5 ಕೆಜಿ ಎಫ್‌ಟಿಎಲ್ ಸಿಲಿಂಡರ್‌ಗಳ ಬೆಲೆಗಳಲ್ಲಿ ಕಡಿತವನ್ನು ಘೋಷಿಸಿವೆ.
ಈ ಮೂಲಕ ಎಲ್‌ಪಿಜಿ ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ಬೆಲೆಯಲ್ಲಿ 30.50 ರೂಪಾಯಿಗಳಷ್ಟು ಇಳಿಕೆಯಾಗಿದೆ. ಈ ಬದಲಾವಣೆಯು ಏಪ್ರಿಲ್ 1, 2024ರಿಂದ ಜಾರಿಗೆ ಬರಲಿದ್ದು 19 ಕೆ.ಜಿ ವಾಣಿಜ್ಯ ಸಿಲಿಂಡರ್‌ಗಳ ಬೆಲೆಯಲ್ಲಿ 30.50 ರೂಪಾಯಿ ಇಳಿಕೆಯನ್ನು ಘೋಷಿಸಲಾಗಿದೆ. 19 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆ ದೆಹಲಿಯಲ್ಲಿ 30.50 ರೂ., ಮುಂಬೈನಲ್ಲಿ 31.50 ರೂ., ಚೆನ್ನೈನಲ್ಲಿ 30.50 ರೂ. ಮತ್ತು ಕೋಲ್ಕತ್ತಾದಲ್ಲಿ 32 ರೂ. ಕಡಿತಗೊಂಡಿದೆ. ಇದೇ ವೇಳೆ 5 ಕೆಜಿ ಎಫ್‌ಟಿಎಲ್ ಸಿಲಿಂಡರ್ ಬೆಲೆ 7.50 ರೂಪಾಯಿ ಇಳಿಕೆಯಾಗಿದೆ.
ಈ ವರ್ಷ ಫೆಬ್ರವರಿ ಮತ್ತು ಮಾರ್ಚ್‌ನಲ್ಲಿ ಸತತ ಎರಡು ಬಾರಿ ಬೆಲೆ ಏರಿಕೆಯಾಗಿದೆ. 2024ರ ಹೊಸ ವರ್ಷದ ಮುನ್ನಾದಿನದಂದು ಪ್ರತಿ 19 ಕೆಜಿ ವಾಣಿಜ್ಯ ಅಡುಗೆ ಅನಿಲ ಸಿಲಿಂಡರ್‌ನ ಬೆಲೆಗಳನ್ನು ₹39.50ರಷ್ಟು ಕಡಿತಗೊಳಿಸಲಾಗಿದೆ. ಇಂದು ಬೆಂಗಳೂರಿನಲ್ಲಿ ವಾಣಿಜ್ಯ ಸಿಲಿಂಡರ್ ರೀಫಿಲ್ ದರ 1844.50 ರೂ.ಗಳಿಗೆ ಇಳಿದಿದೆ.