Fri. Mar 6th, 2026

ಎಂ-ಫಾರ್ಮಾ: ಫೆ.7ರಿಂದ ಇಚ್ಛೆ/ಆಪ್ಷನ್ ನಮೂದಿಸಲು ಅವಕಾಶ

Share this with Friends

ಬೆಂಗಳೂರು: ಪ್ರಥಮ ಎಂ-ಫಾರ್ಮ ಮತ್ತು ಫಾರ್ಮಾ-ಡಿ ಕೋರ್ಸುಗಳ ಪ್ರವೇಶಕ್ಕೆ ರಾಂಕ್  ಪಟ್ಟಿ ಮತ್ತು ಸೀಟ್ ಮ್ಯಾಟ್ರಿಕ್ಸ್ ಅನ್ನು ಪ್ರಾಧಿಕಾರದ ವೆಬ್ ಸೈಟಿನಲ್ಲಿ ಪ್ರಕಟಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಫೆ.7ರಿಂದ ಫೆ.10ರ ಬೆಳಿಗ್ಗೆ 11ರವರೆಗೆ ಇಚ್ಛೆಗಳನ್ನು ಆದ್ಯತಾ ಕ್ರಮದಲ್ಲಿ ನಮೂದಿಸಲು ಅವಕಾಶ ನೀಡಲಾಗಿದೆ  ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ತಿಳಿಸಿದೆ.

ಫೆ.5ರಿಂದ ಫೆ.9ರ ಬೆಳಿಗ್ಗೆ 10 ಗಂಟೆಯವರೆಗೆ ನಿಗದಿತ ಲಿಂಕ್ ಗೆ ಹೋಗಿ ವೆರಿಫಿಕೇಷನ್ ಸ್ಲಿಪ್ ಡೌನ್ ಲೋಡ್ ಮಾಡಿಕೊಳ್ಳಬಹುದು.  ಆನ್ ಲೈನ್ ನಲ್ಲಿ ಅರ್ಜಿಯಲ್ಲಿ ಪರಿಶಿಷ್ಟ ಜಾತಿ ಮೀಸಲಾತಿ ಕೋರಿರುವ ಅಭ್ಯರ್ಥಿಗಳು (ಪರಿಶಿಷ್ಟ ಜಾತಿ-ಎ, ಬಿ ಮತ್ತು ಸಿ) ಒಳಮೀಸಲಾತಿ ಹಾಗೂ ಜಾತಿಪ್ರಮಾಣ ಪತ್ರದ ಆರ್.ಡಿ.ಸಂಖ್ಯೆ ನಮೂದಿಸಿ ವೆರಿಫಿಕೇಷನ್ ಡೌನ್ ಲೋಡ್ ಮಾಡಿಕೊಳ್ಳಬೇಕು ಎಂದು ಪ್ರಾಧಿಕಾರದ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಮಂಗಳವಾರ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಣಕು ಸೀಟು ಹಂಚಿಕೆ ಫಲಿತಾಂಶ ಫೆ.10ರಂದು ಪ್ರಕಟವಾಗಲಿದೆ. ಫೆ.10ರಿಂದ ಫೆ.11ರ ಮಧ್ಯಾಹ್ನದವರೆಗೆ ಆಯ್ಕೆಗಳನ್ನು ಬದಲಿಸಲು ಅವಕಾಶ ನೀಡಲಾಗುತ್ತದೆ. ಫೆ.11ರ ಸಂಜೆ ನೈಜ ಸೀಟು ಹಂಚಿಕೆಯ ಫಲಿತಾಂಶ ಪ್ರಕಟಗೊಳ್ಳಲಿದೆ. ಸೀಟು ಆಯ್ಕೆ ಮಾಡಿಕೊಳ್ಳುವ ಅಭ್ಯರ್ಥಿಗಳು ಫೆ.12ರಿಂದ ಫೆ.16ರೊಳಗೆ ಕಾಲೇಜಿನಲ್ಲಿ ಪ್ರವೇಶ ದೃಢೀಕರಣ ಮಾಡಿಸಿಕೊಳ್ಳಬೇಕು ಎಂದು ಅವರು ಸೂಚಿಸಿದ್ದಾರೆ.

ವಸತಿ ಶಾಲೆ: ಅರ್ಜಿ ಸಲ್ಲಿಸಲು ಫೆ.7ರವರೆಗೆ ಅವಕಾಶ:

2026ನೇ ಸಾಲಿಗೆ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಾತಿಗೆ ಹತ್ತಿರದ ವಸತಿ ಶಾಲೆ/ಕಾಲೇಜುಗಳ ಮೂಲಕ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು  ಫೆ.7ರವರೆಗೆ ಅವಕಾಶವನ್ನು ವಿಸ್ತರಿಸಲಾಗಿದೆ ಎಂದು ಇಸ್ಲಾವುದ್ದೀನ್ ಗದ್ಯಾಳ ಅವರು ತಿಳಿಸಿದ್ದಾರೆ.

ಪರಿಶಿಷ್ಟ ಜಾತಿಗೆ ಸೇರಿದವರು ಒಳಮೀಸಲಾತಿ ವಿವರಗಳನ್ನು ಹಾಗೂ ಜಾತಿ ಪ್ರಮಾಣ ಪತ್ರದಲ್ಲಿ ಮುದ್ರಿತಗೊಂಡಿರುವ ಆರ್ .ಡಿ. ಸಂಖ್ಯೆಯನ್ನು ಆನ್ ಲೈನ್ ಅರ್ಜಿಯಲ್ಲಿ ಕಡ್ಡಾಯವಾಗಿ ನಮೂದಿಸಬೇಕು ಎಂದು ಅವರು ತಿಳಿಸಿದ್ದಾರೆ.


Share this with Friends

Related Post