Mon. Dec 23rd, 2024

ಮಹಾರಾಷ್ಟ್ರಸಿಎಂ ದೇವೇಂದ್ರ ಫಡ್ನವೀಸ್‌ ನಾಳೆ ಪ್ರಮಾಣ ವಚನ

Share this with Friends

ಮುಂಬೈ: ಮಹಾರಾಷ್ಟ್ರ ರಾಜ್ಯ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ದೇವೇಂದ್ರ ಫಡ್ನವೀಸ್‌ ಅವಿರೋಧವಾಗಿ ಆಯ್ಕೆಯಾಗಿದ್ದು,ನಾಳೆ ಅವರು ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಗುರುವಾರ ಮುಂಬೈನ ಆಜಾದ್ ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ.

ಶಾಸಕಾಂಗ ಪಕ್ಷದ ಸಭೆಗೂ ಮುನ್ನ ನಡೆದ ಬಿಜೆಪಿಯ ಕೋರ್ ಕಮಿಟಿ ಸಭೆಯಲ್ಲಿ ದೇವೇಂದ್ರ ಫಡ್ನವೀಸ್ ಅವರ ಹೆಸರನ್ನು ಉನ್ನತ ಹುದ್ದೆಗೆ ಅಂತಿಮಗೊಳಿಸಲಾಯಿತು.

ಬಿಜೆಪಿಯ ಕೋರ್ ಕಮಿಟಿ ಸಭೆಯಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಮತ್ತು ದೇವೇಂದ್ರ ಫಡ್ನವೀಸ್ ಪಾಲ್ಗೊಂಡಿದ್ದರು.

ಬಿಜೆಪಿ ತನ್ನ ಮಹಾರಾಷ್ಟ್ರ ಶಾಸಕಾಂಗ ಪಕ್ಷದ ಸಭೆಗೆ ನಿರ್ಮಲಾ ಸೀತಾರಾಮನ್ ಮತ್ತು ವಿಜಯ್ ರೂಪಾನಿ ಅವರನ್ನು ಕೇಂದ್ರ ವೀಕ್ಷಕರನ್ನಾಗಿ ನೇಮಿಸಿತ್ತು.

ನವೆಂಬರ್ 20 ರಂದು ನಡೆದ ಮಹಾರಾಷ್ಟ್ರ ಚುನಾವಣೆಯಲ್ಲಿ ಬಿಜೆಪಿ ಯಶಸ್ಸು ಸಾಧಿಸಿ ದೇಶದ ಗಮನ ಸೆಳೆದಿದೆ. ರಾಜ್ಯದ 288 ವಿಫಧಾನಸಭಾ ಸ್ಥಾನಗಳ ಪೈಕಿ 132 ಸ್ಥಾನಗಳನ್ನು ಗೆದ್ದಿದೆ.


Share this with Friends

Related Post