Wed. Dec 25th, 2024

ಒಗ್ಗಟ್ಟಾಗಿ ಚುನಾವಣೆ ಮಾಡಿ: ಗೆಲುವು ಖಚಿತ- ಸಿದ್ದರಾಮಯ್ಯ ಕರೆ

Share this with Friends

ಹಾವೇರಿ, ಮಾ 22: ಒಗ್ಗಟ್ಟಾಗಿ ಚುನಾವಣೆ ಮಾಡಿ,ಆಗ ಖಂಡಿತಾ ಗೆಲುವು ಸಿಗಲಿದೆ ಎಂದು ಕಾಂಗ್ರೆಸ್ ಮುಖಂಡರಿಗೆ ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.

ನಾವು ನಡೆಸಿರುವ ಎಲ್ಲಾ ಸಮೀಕ್ಷೆಗಳಲ್ಲೂ ಬೆಳಗಾವಿಯಲ್ಲಿ ಉತ್ತಮ ಪ್ರತಿಕ್ರಿಯೆ ಬಂದಿದೆ,ನೀವೆಲ್ಲಾ ಒಗ್ಗಟ್ಟಾಗಿ ಚುನಾವಣೆ ಮಾಡಿ,ಉತ್ತರ ಕನ್ನಡ ಜಿಲ್ಲೆ ಸೇರಿ ಬೆಳಗಾವಿಯ ಜಿಲ್ಲೆಗಳಿಗೆ ಒಳಪಡುವ ಮೂರೂ ಲೋಕಸಭಾ ಕ್ಷೇತ್ರಗಳಲ್ಲೂ ಖಚಿತವಾಗಿ ಗೆಲುವು ಸಾಧಿಸಬಹುದು ಎಂದು ತಿಳಿಸಿದರು.

ಕಾವೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಬೆಳಗಾವಿ ಜಿಲ್ಲೆಯ ಸಚಿವರು, ಶಾಸಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಮುಖಂಡರ ಸಭೆಯಲ್ಲಿ ಸಿಎಂ ಮಾತನಾಡಿದರು.

ಐದು ಗ್ಯಾರಂಟಿ ಯೋಜನೆಗಳು ಬೆಳಗಾವಿ ಜಿಲ್ಲೆಯ ಲಕ್ಷಾಂತರ ಕುಟುಂಬಗಳ ಮತ್ತು ಮಹಿಳೆಯರ ಬದುಕಿನ ಸಂಕಟವನ್ನು ಕಡಿಮೆ ಮಾಡಿವೆ. ಇದಕ್ಕಾಗಿ ಯುವತಿಯರು ಮತ್ತು ಮಹಿಳೆಯರು ಶೇ80 ರಷ್ಟು ನಮ್ಮ ಪರವಾಗಿ ಇದ್ದಾರೆ ಎಂಬ ಸಕಾರಾತ್ಮಕ ವರದಿ ಸಮೀಕ್ಷೆಗಳಿಂದ ಹೊರ ಬಂದಿವೆ

ಜನರ ಮನೆ ಬಾಗಿಲಿಗೆ ಹೋಗಿ ಪ್ರತೀ ತಿಂಗಳು ಪ್ರತೀ ಕುಟುಂಬಕ್ಕೆ 5-6 ಸಾವಿರ ರೂಪಾಯಿ ಕೊಡುತ್ತಿರುವ ಮತ್ತು ವರ್ಷಕ್ಕೆ 50-60 ಸಾವಿರ ಪ್ರತಿ ಕುಟುಂಬದ ಖಾತೆಗೆ ಜಮೆ ಆಗುತ್ತಿರುವುದನ್ನು ಮನವರಿಕೆ ಮಾಡಿಸಿ, ಜನರ ನಡುವೆ ಗಟ್ಟಿಯಾಗಿ ನಿಂತು ಗೆದ್ದು ಬನ್ನಿ ಎಂದು ಸಿಎಂ ಅಭ್ಯರ್ಥಿಗಳಿಗೆ ಕರೆ ನೀಡಿದರು.

ಮುಖ್ಯಮಂತ್ರಿಗಳ ಭರವಸೆಯ ಮಾತುಗಳಿಗೆ ಸ್ಪಂದಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಬೆಳಗಾವಿಯಲ್ಲಿ ನಾವೆಲ್ಲರೂ ಒಟ್ಟಾಗಿ ಅಖಾಡಕ್ಕೆ ಇಳಿದಿದ್ದೇವೆ ಎರಡೂ ಕ್ಷೇತ್ರದಲ್ಲೂ ಗೆದ್ದು ಬಂದು ಈ ಗೆಲುವನ್ನು ನಿಮಗೆ ಅರ್ಪಿಸುತ್ತೇವೆ ಎಂದು ವಿಶ್ವಾಸದಿಂದ ನುಡಿದರು.

ಸಚಿವ ಸತೀಶ್ ಜಾರಕಿಹೊಳಿ, ಮಾಜಿ ಸಚಿವ ಲಕ್ಷ್ಮಣ್ ಸವದಿ ಮತ್ತು ಜಿಲ್ಲೆಯ ಎಲ್ಲಾ ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಜಿಲ್ಲಾ ಮುಖಂಡರು ಸಭೆಯಲ್ಲಿ ಪಾಲ್ಗೊಂಡಿದ್ದರು.


Share this with Friends

Related Post