Sun. Dec 29th, 2024

ಜಂಬೂಸವಾರಿಗೆ 4,000ಕ್ಕೂ ಹೆಚ್ಚು ಪೊಲೀಸರ ನಿಯೋಜನೆ:ಸೀಮಾ ಲಾಟ್ಕರ್

Share this with Friends

ಮೈಸೂರು: ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಪೊಲೀಸ್ ಇಲಾಖೆಯಿಂದ ಭಾರೀ ಭದ್ರತೆ ಮಾಡಲಾಗಿದ್ದು,4000ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಮೈಸೂರು ನಗರ ಪೊಲೀಸ್ ಕಮೀಷನರ್ ಸೀಮಾ ಲಾಟ್ಕರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಇಂದು ಜಂಬೂಸವಾರಿ ಮೆರವಣಿಗೆಯ ಪುಷ್ಪಾರ್ಚನೆ ರಿಹರ್ಸಲ್ ನಡೆದಿದೆ. ಅಂತಿಮ ಹಂತದ ರಿಹರ್ಸಲ್‌ನಲ್ಲಿ ನಗರ ಸಶಸ್ತ್ರ ಮೀಸಲು ಪಡೆಯ ಸಿಬ್ಬಂದಿ, ಅಶ್ವರೋಹಿ ದಳ, ಪೊಲೀಸ್ ಇಲಾಖೆಯ ಎಂಟು ತುಕಡಿಗಳು ಭಾಗಿಯಾಗಲಿವೆ ಎಂದು ಹೇಳಿದರು

ಈ ಬಾರಿಯ ದಸರಾ ಮಹೋತ್ಸವಕ್ಕೆ ಎರಡು ಹಂತದ ಭದ್ರತೆ ಕೈಗೊಳ್ಳಲಾಗಿದೆ. ಜಂಬೂಸವಾರಿ ಮೆರವಣಿಗೆ ಸಾಗುವ ಮಾರ್ಗದಲ್ಲಿ ಭಾರೀ ಬಂದೋಬಸ್ತ್ ಮಾಡಲಾಗುವುದು ಎಂದು ತಿಳಿಸಿದರು.

ಮೈಸೂರು ಜಿಲ್ಲೆ ಮಾತ್ರವಲ್ಲದೇ ರಾಜ್ಯದ ವಿವಿಧೆಡೆಗಳಿಂದ ಆಗಮಿಸಿರುವ ನಾಲ್ಕು ಸಾವಿರಕ್ಕೂ ಹೆಚ್ಚು ಪೊಲೀಸರು ಭದ್ರತಾ ಕರ್ತವ್ಯ ನಿರ್ವಹಿಸಲಿದ್ದಾರೆ.

ಮಫ್ತಿಯಲ್ಲಿರುವ ಪೊಲೀಸರು ಎಲ್ಲೆಡೆ ನಿಗಾ ವಹಿಸಲಿದ್ದಾರೆ. ಜಂಬೂಸವಾರಿ ಮೆರವಣಿಗೆ ಸಾಗುವ ಮಾರ್ಗ ಸೇರಿದಂತೆ ಆಯಕಟ್ಟಿನ ಜನನಿಬಿಡ ಸ್ಥಳದಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ದೇಶ ವಿದೇಶಗಳಿಂದ ಆಗಮಿಸುವ ಪ್ರವಾಸಿಗರಿಗೆ ರಕ್ಷಣೆ ನೀಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸೀಮಾ ಲಾಟ್ಕರ್ ತಿಳಿಸಿದರು.


Share this with Friends

Related Post