Mon. Dec 23rd, 2024

ಕೆಸರು ಗದ್ದೆಯಂತಾದ ನಂಜನಗೂಡು ರಸ್ತೆಗಳು

Share this with Friends

ಮೈಸೂರು,ಜೂ.28:‌ ಕಳೆದ ಮೂರ್ನಾಲ್ಕು ದಿನಗಳಿಂದ ಜಡಿಮಳೆ ಸುರಿಯುತ್ತಿದ್ದು,
ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ರಸ್ತೆಗಳು ಕೆಸರುಗದ್ದೆಯಾಗಿವೆ‌.

ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ರಸ್ತೆಗಳು ಕೆಸರುಗದ್ದೆಯಾಗಿದ್ದು,ವಾಹನ ಸವಾರರಿಗೆ ತೀವ್ರ ಕಿರಿಕಿರಿಯಾಗುತ್ತಿದೆ.

ಇಲ್ಲಿನ ಮುಖ್ಯ ರಸ್ತೆ ಡಾಂಬರು ಕಂಡು ದಶಕಗಳೇ ಕಳೆದಿವೆ, ಬಂದರೆ ಕೆಸರುಮಯವಾಗುತ್ತದೆ, ದಿನನಿತ್ಯ ಈ ರಸ್ತೆಯಲ್ಲಿ ನೂರಾರು ವಾಹನಗಳು ಸಂಚರಿಸುತ್ತಿದ್ದು,ನರಕ ದರ್ಶನವಾಗುತ್ತದೆ.

ರಸ್ತೆಯ ಪಕ್ಕಕ್ಕೆ ಹೊಂದಿಕೊಂಡಂತೆ ಸರ್ಕಾರಿ ಶಾಲೆ ಇದ್ದು ವಿದ್ಯಾರ್ಥಿಗಳು ಶಾಲೆಯೊಳಗೆ ಹೋಗಲು ಪರದಾಡುತ್ತಾರೆ.

ಕಳೆದ 15 ವರ್ಷಗಳಿಂದ ಈ ರಸ್ತೆಯನ್ನು ಸರಿಪಡಿಸುವಂತೆ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಗಮನಕ್ಕೆ ತಂದರು ಯಾವುದೇ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚುಂಚನಹಳ್ಳಿ ಗ್ರಾಮದ ಬಸ್ ನಿಲ್ದಾಣದಿಂದ ಗ್ರಾಮದ ಒಳಗೆ ಪ್ರವೇಶಿಸುವ ಮುಖ್ಯ ರಸ್ತೆ ಸುಮಾರು 2 ಕಿಲೋ ಮೀಟರ್ ತನಕ ಗುಂಡಿ ಬಿದ್ದು ಹಾಳಾಗಿದೆ.

ಕಳೆದ 15 ವರ್ಷಗಳಿಂದ ಸಿದ್ದರಾಮಯ್ಯ ಮತ್ತು ಅವರ ಪುತ್ರ ಡಾ. ಯತೀಂದ್ರ ಈ ಕ್ಷೇತ್ರದ ಶಾಸಕರಾಗಿದ್ದಾರೆ. ಸಿದ್ದು ಸಿಎಂ ಆದರೂ ರಸ್ತೆಯನ್ನು ಡಾಂಬರೀಕರಣ ಮಾಡಿಸುವಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂದು ಜನ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ಇನ್ನಾದರೂ ನಂಜನಗೂಡು ತಾಲೂಕಿನ ರಸ್ತೆಗಳನ್ನು ಡಾಂಬರೀಕರಣ ಮಾಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.


Share this with Friends

Related Post