Mon. Dec 23rd, 2024

ನಾನು ಯೂ ಟರ್ನ್ ಹೊಡೆಯಲ್ಲ : ನಿಖಿಲ್ ಕುಮಾರಸ್ವಾಮಿ

Nikhil Kumaraswamy
Share this with Friends

ಬೆಂಗಳೂರು: ಈಗ ನಾನು ಮಂಡ್ಯ ಆಕಾಂಕ್ಷಿ ಅಲ್ಲ. 2019 ರಲ್ಲಿ ಅಭ್ಯರ್ಥಿ ಆಗಿದ್ದೆ, ಸೋತಿದ್ದೆ. ಈಗಲೂ ನನ್ನ ಸ್ಪರ್ಧೆಗೆ ಸಹಜವಾಗಿ ಮಂಡ್ಯ ಮುಖಂಡರ ಒತ್ತಾಯ ಇದೆ. ಕಳೆದ ನಾಲ್ಕು ದಿನಗಳಿಂದಲೂ ನಾನು ಗಮನಿಸುತ್ತಿದ್ದೇನೆ. ನಾನು ಯೂ ಟರ್ನ್ ಹೊಡೆಯಲ್ಲ. ನನ್ನ ನಿರ್ಧಾರದಲ್ಲಿ ನನಗೆ ಸ್ಪಷ್ಟತೆ ಇದೆ. ನಾನು ಮಂಡ್ಯ ಆಕಾಂಕ್ಷಿ ಅಲ್ಲ ಎಂದು ಮಂಡ್ಯ ಸ್ಪರ್ಧೆ ವಿಚಾರವನ್ನು ಜೆಡಿಎಸ್ ಮುಖಂಡ ನಿಖಿಲ್ ಕುಮಾರಸ್ವಾಮಿ ನಿರಾಕರಿಸಿದ್ದಾರೆ.

ಜೆಡಿಎಸ್ ಪಕ್ಷದ ಕಚೇರಿಗೆ ಭೇಟಿ ನೀಡಿ ಮಾತನಾಡಿದ ಅವರು, ನೀವು ಬರಬೇಕು, ಚುನಾವಣೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮಂಡ್ಯ ಮುಖಂಡರು, ಕಾರ್ಯಕರ್ತರು ಕರೆದರು. ಈ ಒತ್ತಡದ ಕಾರಣವಾಗಿ ನಾನು ಮಂಡ್ಯ ಭಾಗದಲ್ಲಿ ಓಡಾಡಿದ್ದೆ. ಮೈತ್ರಿ ಬಲಪಡಿಸಬೇಕು. ಮತ್ತೆ ಮೋದಿಯವರು ಪ್ರಧಾನಿ ಆಗಬೇಕು. ನನ್ನ ಗಮನ 28 ಕ್ಷೇತ್ರಗಳ ಕಡೆಯೂ ಇರುತ್ತದೆ ಎಂದು ಹೇಳಿದರು.

ಬಂಡೀಪುರದಲ್ಲಿ ಪ್ರಾಣಿಗಳ ಸಂಚಾರಕ್ಕೆ ತೊಂದರೆಯಾಗದಂತೆ ಕ್ರಮ-ಖಂಡ್ರೆ


Share this with Friends

Related Post