Mon. Dec 23rd, 2024

ಈ ಬಾರಿ ಜನ ನನಗೆ ಆಶೀರ್ವದಿಸುತ್ತಾರೆ:ನಿಖಿಲ್ ವಿಶ್ವಾಸ

Share this with Friends

ರಾಮನಗರ: ಕಳೆದ ಎರಡು ಬಾರಿ ರಾಜಕೀಯ ಕುತಂತ್ರದಿಂದ ಸೋಲು ಅನುಭವಿಸಿದೆ, ಈಗಲೂ ಚುನಾವಣೆಗೆ ನಿಲ್ಲಬೇಕೆಂಬ ಆಸೆ ಇರಲಿಲ್ಲ, ಆದರೆ ಸ್ಪರ್ಧೆ ಅನಿವಾರ್ಯವಾಯ್ತು ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದರು.

ಮಾಧ್ಯಮಗೋಷ್ಟಡಿಯಲ್ಲಿ ಮನದಾಳದ ಮಾತು ಬಿಚ್ಚಿಟ್ಟ ನಿಖಿಲ್,
ಕೊನೆ ಕ್ಷಣದಲ್ಲಿ ಆದ ರಾಜಕೀಯ ಪರಿಸ್ಥಿತಿಗೆ ಕಾರ್ಯಕರ್ತರು ಆತಂಕ, ಗೊಂದಲಕ್ಕೆ ಪರಿಹಾರ ಕೊಡಬೇಕಿತ್ತು, ಹಾಗಾಗಿ ಸ್ಪರ್ಧೆ ಅನಿವಾರ್ಯ ಆಯ್ತು ಎಂದು ಹೇಳಿದರು.

ರಾಜ್ಯದಲ್ಲಿ ನಿನ್ನೆ ಮೂರು ಕ್ಷೇತ್ರಗಳಿಗೆ ಉಪಚುನಾವಣೆ ನಡೆದಿದೆ. ಇದರಲ್ಲಿ ಚನ್ನಪಟ್ಟಣ ಕ್ಷೇತ್ರ ಬಹಳ ಮಹತ್ವ ಪಡೆದುಕೊಂಡಿದೆ, ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಚನ್ನಪಟ್ಟಣ ಫಲಿತಾಂಶದ ಬಗ್ಗೆ ಕುತೂಹಲ ಇದೆ.ಈ ಉಪಚುನಾವಣೆ ರಾಜ್ಯದ ಇತಿಹಾಸದ ಪುಟದಲ್ಲಿ ಉಳಿಯುತ್ತದೆ. ಈ ಉಪಚುನಾವಣೆ ನಿಖಿಲ್ ಕುಮಾರಸ್ವಾಮಿ ಉಪಚುನಾವಣೆ ಆಗಿರಲಿಲ್ಲ, ಎರಡೂ ಪಕ್ಷದ ಕಾರ್ಯಕರ್ತರ ಚುನಾವಣೆ ಎಂದು ನುಡಿದರು.

ಸೋಮವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾಜಿ ಅವರು ಸ್ಪಷ್ಟ ಸಂದೇಶ ಕೊಟ್ಟಿದ್ದರು, ನನ್ನ ಪರವಾಗಿ ನಡ್ಡಾರವರು ಮಾತನಾಡಿದ್ದಕ್ಕೆ ಧನ್ಯವಾದ ತಿಳಿಸುತ್ತೇನೆ ಎಂದರು.

ಎರಡೂ ಪಕ್ಷದ ಕಾರ್ಯಕರ್ತರು ಒಟ್ಟಾಗಿ ಚುನಾವಣೆ ಮಾಡಿದ್ದಾರೆ. ಕಳೆದ 18 ದಿನಗಳ ಹಿಂದೆ ಎನ್ ಡಿ ಎ ಅಭ್ಯರ್ಥಿ ಯಾರು ಆಗಬೇಕು ಎಂಬ ಪ್ರಶ್ನೆ ಎದ್ದಿತ್ತು, ಆಗ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ನಿವಾಸಕ್ಕೆ ಕರೆದು ನನ್ನ ಹೆಸರು ಘೋಷಣೆ ಮಾಡಿದರು, ಕಳೆದ ಎರಡು ಬಾರಿ ರಾಜಕೀಯ ಕುತಂತ್ರದಿಂದ ನಾನು ಸೋಲು ಅನುಭವಿಸಬೇಕಾಯಿತು ಎಂದು ಬೇಸರದಲ್ಲೇ ಹೇಳಿದರು.

ಕಳೆದ 18 ದಿನಗಳಿಂದ ಸರಿಯಾಗಿ ನಿದ್ದೆ ಮಾಡಿಲ್ಲ. ಮುಖಂಡರು,ಎರಡೂ ಪಕ್ಷಗಳ ಕಾರ್ಯಕರ್ತರು ನಿದ್ದೆಗೆಟ್ಟು ಕೆಲಸ ಮಾಡಿದ್ದಾರೆ.ಈ ಚುನಾವಣೆಯಲ್ಲಿ ನನಗೆ ಪೂರಕವಾಗಿ ಜನ ಆಶೀರ್ವಾದ ಮಾಡಿದ್ದಾರೆ. ಹಿರಿಯ ನಾಗರೀಕರು, ಯುವಕರು ಹೆಚ್ಚು ಬೆಂಬಲ ನೀಡಿದ್ದಾರೆ ಎಲ್ಲರಿಗೂ ಧನ್ಯವಾದ ಸಲ್ಲಿಸುತ್ತೇನೆ ಎಂದು ತಿಳಿಸಿದರು.

ಈ ಉಪಚುನಾವಣೆ ನನಗೆ ಅಗ್ನಿ ಪರೀಕ್ಷೆ ಅಂತ ಹೇಳಿದ್ದೆ. ನಿನ್ನೆ ಶೇ 88.80 ರಷ್ಟು ಮತದಾನ ಆಗಿದೆ. ಚನ್ನಪಟ್ಟಣ ಇತಿಹಾಸದಲ್ಲಿ ದೊಡ್ಡ ಪ್ರಮಾಣದಲ್ಲಿ ಮತದಾನ ಆಗಿದೆ ತಾಲೂಕಿನ ಜನತೆ ಒಂದು ದೊಡ್ಡ ಸಂದೇಶ ಕೊಟ್ಟಿದ್ದಾರೆ, ನನಗೆ ಈ ಬಾರಿ ಅವಕಾಶ ಕೊಡುವ ತೀರ್ಮಾನ ಮಾಡಿದ್ದಾರೆ ಎಂದು ನಿಖಿಲ್‌ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.


Share this with Friends

Related Post