Fri. Apr 4th, 2025

ನಿಲಯ್ ವಿಪಿನ್‍ ಚಂದ್ರ ಅಂಜಾರಿಯ ಚೀಫ್ ಜಸ್ಟಿಸ್

Share this with Friends

ಬೆಂಗಳೂರು, ಫೆ.25: ನ್ಯಾಯಮೂರ್ತಿ ನಿಲಯ್ ವಿಪಿನ್‍ಚಂದ್ರ ಅಂಜಾರಿಯ ಅವರು ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾಗಿ ಅಧಿಕಾರ ಸ್ವೀಕರಿಸಿದರು.

ರಾಜಭವನದ ‌‌ಗಾಜಿನ ಮನೆಯಲ್ಲಿ
ಇಂದು ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ರಮಾಣ ವಚನವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೋದನೆ ಮಾಡಿದರು.

ಪ್ರಮಾಣ ವಚನ ಸ್ವೀಕಾರ‌ ನೆರವೇರಿದ ನಂತರ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯ ನ್ಯಾಯಮೂರ್ತಿ ನಿಲಯ್ ವಿಪಿನ್‍ಚಂದ್ರ ಅಂಜಾರಿಯ ಅವರಿಗೆ ಹೂ ಗುಚ್ಛವನ್ನು ನೀಡಿ ಅಭಿನಂದಿಸಿದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸೇರಿದಂತೆ ಅನೇಕ ಗಣ್ಯರು ನ್ಯಾಯ ಮೂರ್ತಿಗಳು ನ್ಯಾಯವಾದಿಗಳು ಪಾಲ್ಗೊಂಡಿದ್ದರು.


Share this with Friends

Related Post