Thu. Mar 5th, 2026

ಸಚಿವ ಸ್ಥಾನದ ಬಗ್ಗೆ ನಿರೀಕ್ಷೆ ಇಟ್ಟುಕೊಂಡಿಲ್ಲ:ಯದುವೀರ್

Share this with Friends

ಮೈಸೂರು,ಜೂ.2: ಕೇಂದ್ರದಲ್ಲಿ ಸಚಿವ ಸ್ಥಾನದ ಕುರಿತು ಯಾವುದೇ ನಿರೀಕ್ಷೆ ಇಟ್ಟುಕೊಂಡಿಲ್ಲ, ಫಲಿತಾಂಶಕ್ಕಾಗಿ ಕಾಯುತ್ತಿದ್ದೇನೆ ಎಂದು ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ತಿಳಿಸಿದರು.

ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,ಸಮೀಕ್ಷೆಗಳಲ್ಲಿ ದೇಶ ಹಾಗೂ ರಾಜ್ಯದಲ್ಲಿ ಬಿಜೆಪಿಗೆ ಮುನ್ನಡೆ ಸಿಕ್ಕಿರುವುದು ಖುಷಿಯ ವಿಚಾರ. ಜನ ಮತ್ತೊಮ್ಮೆ ಸಮಾಜ ಸೇವೆ ಮಾಡಲು ಆಶೀರ್ವಾದ ಮಾಡಿದ್ದಾರೆ ಎಂದು ಹೇಳಿದರು.

ಮೋದಿಯವರು ಮತ್ತೊಮ್ಮೆ ದೇಶದ ಪ್ರಧಾನಿಯಾಗಲಿದ್ದಾರೆ, ರಾಜ್ಯದಲ್ಲಿ ಬಿಜೆಪಿ ಮುನ್ನಡೆ ನಿರೀಕ್ಷೆ ಮಾಡಿದ್ದೆವು,ನಮ್ಮ ನಿರೀಕ್ಷೆಯಂತೆ ಫಲಿತಾಂಶ ಬಂದಿದೆ ಎಂದು ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದರು.


Share this with Friends

Related Post