Tue. Dec 24th, 2024

ಮುಸ್ಲಿಂರಿಗೆ ಒಬಿಸಿ ಮೀಸಲಾತಿ; ದಲಿತರಿಗೆ ಅನ್ಯಾಯ ಮಾಡಲು ಕಾಂಗ್ರೆಸ್ ಯತ್ನ: ಜೋಶಿ ಆರೋಪ

Share this with Friends

ಹುಬ್ಬಳ್ಳಿ, ಏಪ್ರಿಲ್‌ 25: ಅಹಿಂದ,ದಲಿತ ಪರ ಎನ್ನುವ ಸರ್ಕಾರ ಒಬಿಸಿಯಲ್ಲಿ ದಲಿತರಿಗಿದ್ದ ಮೀಸಲಾತಿ ಕಿತ್ತು ಮುಸ್ಲಿಂರಿಗೆ ಕೊಡಲು ಹೊರಟಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿಕಾರಿದರು.

ಹುಬ್ಬಳ್ಳಿಯಲ್ಲಿ ಗುರುವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮುಸ್ಲಿಂ ಓಲೈಕೆಗಾಗಿ ದಲಿತರಿಗೆ ಹೀಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ದೂರಿದರು.

ಕಾಂಗ್ರೆಸ್ ನಾಯಕರು ಕರ್ನಾಟಕಕ್ಕೆ ವಸೂಲಿಗೆ ಬರುತ್ತಾರೆ ಅಷ್ಟೇ, ಪ್ರಧಾನಿ ಮೋದಿ ಅವರ ಬಗ್ಗೆ, ಬಿಜೆಪಿ ಬಗ್ಗೆ ಮಾತನಾಡುವ ಯೋಗ್ಯತೆ ಇವರಿಗಿಲ್ಲ ಎಂದು ಜೋಶಿ ತಿರುಗೇಟು ನೀಡಿದರು.

ಕರ್ನಾಟಕ, ತೆಲಂಗಾಣ ಮಾತ್ರ ಕಾಂಗ್ರೆಸ್ ಅಧಿಕಾರದಲ್ಲಿದ್ದು, ಹಿಮಾಚಲ ಪ್ರದೇಶದಲ್ಲಿ ಅವರ ಸರ್ಕಾರ ತೇಲಾಡುತ್ತಿದೆ. ದೇಶದ ಜನ ಕಾಂಗ್ರೆಸ್ಸಿಗರ ಡಬಲ್ ಸ್ಟ್ಯಾಂಡ್ ಅನ್ನು ನೋಡಿ ಬಿಟ್ಟಿದ್ದಾರೆ. ಹಾಗಾಗಿ ಈ ಸ್ಥಿತಿಗೆ ತಂದಿದ್ದಾರೆ ಎಂದು ಲೇವಡಿ ಮಾಡಿದರು.

ದೇಶದಲ್ಲಿ 230 ಕ್ಷೇತ್ರಗಳಿಗೆ ಸ್ಪರ್ಧಿಸಿದ್ದಾರೆ, ಅಧಿಕಾರಕ್ಕೆ ಬರುವಷ್ಟು ಸ್ಥಾನಗಳಿಗೂ ಸ್ಪರ್ಧಿಸದ ಇವರು ಬಿಜೆಪಿ, ಮೋದಿ ಬಗ್ಗೆ ಮಾತಾಡುತ್ತಾರೆ. ಇದು ಅವರ ಹತಾಶೆಯನ್ನು ತೋರಿಸುತ್ತದೆ ಎಂದು ಜೋಶಿ ಟೀಕಿಸಿದರು.

ಎಲ್ಲಾ ಸರ್ವೆಗಳಲ್ಲಿ ಬಿಜೆಪಿ 370, 380 ಗೆಲ್ಲುತ್ತದೆ ಎಂಬ ವರದಿ ಇದೆ. ಆದರೆ, ನಾವು 400 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ ಎಂದು ಪ್ರಲ್ಹಾದ ಜೋಶಿ ತಿಳಿಸಿದರು.


Share this with Friends

Related Post