ನವದೆಹಲಿ: ಬಹು ನಿರೀಕ್ಷಿತ ಒಂದು ದೇಶ, ಒಂದು ಚುನಾವಣೆ ಮಸೂದೆ ಲೋಕಸಭೆಯಲ್ಲಿ ಮಂಡನೆಯಾಗಿದೆ.
ಚುನಾವಣೆ ವೇಳೆ ಪ್ರಣಾಳಿಕೆಯಲ್ಲಿ ಬಿಜೆಪಿ ಘೋಷಣೆ ಮಾಡಿದಂತೆ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸಲು ಅನುಮತಿ ನೀಡುವ ಒಂದು ದೇಶ, ಒಂದು ಚುನಾವಣೆ ಮಸೂದೆ ಲೋಕಸಭೆಯಲ್ಲಿ ಮಂಡನೆಯಾಯಿತು.
ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಸಂವಿಧಾನ (ನೂರ ಇಪ್ಪತ್ತೊಂದನೆ ತಿದ್ದುಪಡಿ) ಮಸೂದೆ 2024 ಮತ್ತು ಕೇಂದ್ರಾಡಳಿತ ಪ್ರದೇಶಗಳ ಕಾನೂನುಗಳು (ತಿದ್ದುಪಡಿ) ಮಸೂದೆಯನ್ನು ಮಂಡಿಸಿದರು.
ಮಸೂದೆ ಮಂಡನೆಯ ಬೆನ್ನಲ್ಲೇ ಐ ಎನ್ ಡಿ ಐ ಎ ಒಕ್ಕೂಟದ ಸದಸ್ಯರು ಭಾರೀ ವಿರೋಧ ವ್ಯಕ್ತಪಡಿಸಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು.
ಸಂಸದ ಮನೀಶ್ ತಿವಾರಿ, ಕೇಂದ್ರ ಮತ್ತು ರಾಜ್ಯದ ಅವಧಿಯನ್ನು ಹೇಗೆ ಏಕ ಕಾಲದಲ್ಲಿ ಮಾಡಲು ಸಾಧ್ಯ ಭಾರತ ಒಕ್ಕೂಟ ದೇಶ, ಕೇಂದ್ರೀಕರಣ ಮಾಡುವುದು ಸರಿಯಲ್ಲ ಇದು ಸಂವಿಧಾನ ವಿರೋಧಿ ತಿದ್ದುಪಡಿ ಎಂದು ಕಿಡಿಕಾರಿದರು.
ಎಲ್ಲ ರಾಜ್ಯಗಳು ಬೇರೆ ಬೇರೆ ವೈವಿಧ್ಯತೆ ಹೊಂದಿವೆ. ಇದನ್ನು ಗಮನದಲ್ಲಿಟ್ಟುಕೊಂಡು ಒಕ್ಕೂಟ ವ್ಯವಸ್ಥೆ ಮಾಡಿದರು. ಎಂಟು ವಿಧಾನಸಭೆ ಕ್ಷೇತ್ರಗಳ ವಿಧಾನಸಭೆ ಚುನಾವಣೆಯನ್ನು ಒಟ್ಟಿಗೆ ಮಾಡಲು ಸಾಧ್ಯವಾಗಲಿಲ್ಲ. ನಾಲ್ಕು ರಾಜ್ಯಗಳ ಚುನಾವಣೆ ಒಟ್ಟಿಗೆ ಮಾಡಲು ಸಾಧ್ಯವಾಗಲಿಲ್ಲ. ಈಗ ಇಡೀ ದೇಶದಲ್ಲಿ ಒಟ್ಟಿಗೆ ಚುನಾವಣೆ ಮಾಡುತ್ತೇವೆ ಎಂದು ಹೇಳುತ್ತಿದ್ದೀರಿ ಅದು ಸಾಧ್ಯವೆ ಎಂದು ಎಸ್‌ಪಿ ಸಂಸದ ಧರ್ಮೇಂದ್ರ ಯಾದವ್ ಆಕ್ರೋಶ ವ್ಯಕ್ತಪಡಿಸಿದರು.