Fri. Dec 27th, 2024

ಕರ್ನಾಟಕದಲ್ಲಿ ಆಪರೇಶನ್ ಕಮಲ ಅಸಾಧ್ಯ-ಸಿಎಂ ಸಿದ್ದರಾಮಯ್ಯ

Share this with Friends

ಬೆಂಗಳೂರು, ಮೇ.13:ಯಾವ ಕಾರಣಕ್ಕೂ ನಮ್ಮ ಸರ್ಕಾರವನ್ನು ಆಪರೇಷನ್ ಕಮಲ ಮಾಡಲು ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಎನ್.ಡಿ.ಎ ಈ ಬಾರಿ ಸೋಲಲಿದೆ, ಆಪರೇಶನ್ ಕಮಲ ಬಿಜೆಪಿಯ ಹಗಲುಗನಸು ಎಂದು ಹೇಳಿದರು.

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ, ಮಹಾರಾಷ್ಟ್ರದಲ್ಲಿ ಆದಂತೆ ಆಪರೇಶನ್ ಕಮಲ ನಡೆಯಲಿದೆ ಎಂದು ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಕಳೆದ ಒಂದು ವರ್ಷದಿಂದ ಇಂತಹ ಪ್ರಯತ್ನ ಮಾಡಿ ವಿಫಲರಾಗಿದ್ದಾರೆ ಇನ್ನೊಂದು ಬಾರಿ ಏಕೆ ಪ್ರಯತ್ನಿಸುತ್ತಾರೆ,ಅಲ್ಲದೆ ನಮ್ಮ ಶಾಸಕರು ಯಾರೂ ಮಾರಾಟವಾಗಲು ತಯಾರಿಲ್ಲ ಎಂದು ತಿರುಗೇಟು ನೀಡಿದರು.

ಕಾಂಗ್ರೆಸ್ ನೇತೃತ್ವದ ಇಂಡಿಯಾ ಗೆಲ್ಲಲಿದ್ದು ನಮ್ಮವರೇ ಪ್ರಧಾನಮಂತ್ರಿಯಾಗಲಿದ್ದಾರೆ ಎಂದು ಸಿದ್ದು ಭವಿಷ್ಯ ನುಡಿದರು.

ಪದವೀಧರರ ಕ್ಷೇತ್ರದಿಂದ ರಾಮೋಜಿ ಗೌಡ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಹಾಗೂ ಶಿಕ್ಷಕರ ಕ್ಷೇತ್ರದಿಂದ ಬಿ. ಟಿ.ಶ್ರೀನಿವಾಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ನಾನು, ಕೆ. ಹೆಚ್. ಮುನಿಯಪ್ಪ, ರಾಮಲಿಂಗಾರೆಡ್ಡಿ, ಮಧು ಬಂಗಾರಪ್ಪ, ನಜೀರ್ ಅಹ್ಮದ್ ಪಕ್ಷದ ಅಭ್ಯರ್ಥಿಗಳ ಪರವಾಗಿ ಜೊತೆಯಲ್ಲಿದ್ದೇವೆ. ನಮ್ಮ ಮಾಹಿತಿ ಪ್ರಕಾರ ಎರಡೂ ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗಳು ಗೆಲ್ಲಲ್ಲಿದ್ದಾರೆ ಎಂದು ಸಿದ್ದರಾಮಯ್ಯ ತಿಳಿಸಿದರು.


Share this with Friends

Related Post