Sun. Dec 29th, 2024

ಮತದಾನ ಜಾಗೃತಿಗೆ ನಮ್ಮ ನಡೆ, ಮತಗಟ್ಟೆಯ ಕಡೆ ಅಭಿಯಾನ

Share this with Friends

ಮೈಸೂರು ಏ.17: ಏ‌ 21 ರಂದು ನಮ್ಮ ನಡೆ ಮತಟ್ಟೆಯ ಕಡೆ ಜಾಗೃತಿ ಕಾರ್ಯಕ್ರಮವನ್ನು ಎಲ್ಲಾ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಹಮ್ಮಿಕೊಳ್ಳಬೇಕಿದೆ.

ಈ ಕುರಿತು ಪಿರಿಯಾಪಟ್ಟಣ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಿ.ಬಿ.ಸುನೀಲ್ ಕುಮಾರ್ ಮಾತನಾಡಿದ್ದಾರೆ.

ಪಿರಿಯಾಪಟ್ಟಣ ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಅವರು ಮಾತನಾಡಿದರು.

ಮತಗಟ್ಟೆಗಳಲ್ಲಿ ಕನಿಷ್ಠ ಮೂಲಭೂತ ಸೌಲಭ್ಯಗಳು ಇರುವುದನ್ನು ಖಚಿತಪಡಿಸಿಕೊಳ್ಳುವುದರ ಜೊತೆಗೆ ಗ್ರಾಮಪಂಚಾಯಿತಿ ಮಟ್ಟದಲ್ಲಿ ಪಿಡಿಒಗಳ ನೇತೃತ್ವದಲ್ಲಿ ಮತದಾನ ಜಾಗೃತಿ ಮೂಡಿಸುವ ಸಲುವಾಗಿ ನಮ್ಮ ನಡೆ, ಮತಗಟ್ಟೆಯ ಕಡೆ ಕಾರ್ಯಕ್ರಮವನ್ನು ಏಪ್ರೀಲ್ 21 ರಂದು ಎಲ್ಲಾ ಮತಗಟ್ಟೆಗಳಲ್ಲಿ ರಾಷ್ಟ್ರೀಯ ಹಬ್ಬ ಮಾದರಿಯಲ್ಲಿ ಹಮ್ಮಿಕೊಳ್ಳುವಂತೆ ಸೂಚಿಸಿದರು.

ಏಪ್ರಿಲ್ 26 ಮತದಾನ ದಿನದಂದು ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ಚುನಾವಣಾ ಆಯೋಗದ ಸೂಚನೆಯಂತೆ ಪ್ರತಿ ಗಂಟೆಗೊಮ್ಮೆ ಮತದಾನ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನದಲ್ಲಿ ಭಾಗವಹಿಸುವಂತೆ ಮಾಡಬೇಕೆಂದು ಹೇಳಿದರು.

ಬಿಎಲ್ಒಗಳು ತಮ್ಮ ಹಂತದಲ್ಲಿ ಪ್ರತಿ ಮನೆ,ಮನೆಗೂ ಭೇಟಿ ನೀಡಿ ಮತದಾನದ ಮಾಹಿತಿಯನ್ನು ನೀಡುವುದರ ಜೊತೆಗೆ ಕಡ್ಡಾಯವಾಗಿ ಮತದಾನ ಮಾಡುವಂತೆ ಮಾಹಿತಿ ನೀಡಬೇಕು ಎಂದು ತಿಳಿಸಿದರು.

ಮತದಾನ ಜಾಗೃತಿ ಪೋಸ್ಟರ್ ಗಳನ್ನು ಬಿಡುಗಡೆಗೊಳಿಸಲಾಯಿತು. ಬಳಿಕ ತಾಲ್ಲೂಕು ಪಂಚಾಯಿತಿ ಆವರಣದಿಂದ ಬಸ್ ನಿಲ್ದಾಣದವರೆಗೆ ಜಾಥ ನಡೆಸುವ ಮೂಲಕ ಸಾರ್ವಜನಿಕರಿಗೆ ಕಡ್ಡಾಯವಾಗಿ ಮತದಾನ ಮಾಡುವಂತೆ ಜಾಗೃತಿ ಮೂಡಿಸಲಾಯಿತು.

ಟಿಪಿಒ ವಸಂತಲಕ್ಷ್ಮೀ, ಪಂಚಾಯತ್ ರಾಜ್ ಸಹಾಯಕ ನಿರ್ದೇಶಕರಾದ ಜಿ.ಸಿ.ಮಹದೇವ್,ಪುರಸಭೆ ಹೆಲ್ತ್ ಇನ್ಸ್ ಪೆಕ್ಟರ್ ಮೋಹನ್ ಹಾಗೂ 34 ಗ್ರಾಮಪಂಚಾಯಿತಿ ಪಿಡಿಒಗಳು, ಬಿಎಲ್ಒಗಳು ಹಾಜರಿದ್ದರು.


Share this with Friends

Related Post