Sat. Mar 7th, 2026

ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ನಿಧನ:ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

Share this with Friends

ಬೆಂಗಳೂರು: ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ನಡೆಸಲಾಗುವುದು  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು.ತಿಮ್ಮಕ್ಕ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ರಾಜಕೀಯ ಗಣ್ಯರು,ಪರಿಸರ ಪ್ರೇಮಿಗಳು ಸಂತಾಪ ಸೂಚಿಸಿದ್ದಾರೆ.

ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರ ಅಂತಿಮ ದರ್ಶನ ಪಡೆದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂಂತ್ರಿ ಸಿದ್ದರಾಮಯ್ಯ  ಸಾಲು ಮರದ ತಿಮ್ಮಕ್ಕನವರು  ಇಂದು ದೈವಾಧೀನರಾಗಿದ್ದಾರೆ.  ಅವರು ಹುಟ್ಟೂರು ಮಾಗಡಿ ತಾಲ್ಲೂಕು ಹುಲಿಕಲ್ ಗ್ರಾಮ ಜನಿಸಿದರು. ಮಕ್ಕಳಿಲ್ಲದ ತಿಮ್ಮಕ್ಕನವರು ಮರಗಿಡಗಳನ್ನೇ ತಮ್ಮ ಮಕ್ಕಳಂತೆ ಸಾಕುತ್ತಿದ್ದರು. ಅವರು ನೆಟ್ಟಿರುವ ಮರಗಳು ಇವತ್ತು ಹೆಮ್ಮರವಾಗಿ ಬೆಳೆದು ನಿಂತಿದೆ. ಪರಿಸರವಾದಿಯಾಗಿದ್ದ ತಿಮ್ಮಕ್ಕನವರ ಸೇವೆಯನ್ನು ಪರಿಗಣಿಸಿ , ಕೇಂದ್ರಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು  ಎಂದರು.

ತಿಮ್ಮಕ್ಕ ಅವರ ಕೊನೆ ಆಸೆ: ಪರಿಶೀಲಿಸಿ ಕ್ರಮ

ತಿಮ್ಮಕ್ಕ ಅವರ ಕೊನೆ ಆಸೆಯ ಪತ್ರ ಕೊಟ್ಟಿದ್ದಾರೆ. ಬೇಲೂರಿನಲ್ಲಿ  ತಿಮ್ಮಕ್ಕ ವಸ್ತು  ಸಂಗ್ರಹಾಲಯವನ್ನು ಮಾಡಬೇಕು ಎಂದು ಹೇಳಿದ್ದು, ಈ ಬಗ್ಗೆ ಸರ್ಕಾರ ಪರಿಶೀಲಿಸಿ ಪರಿಗಣಿಸಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ತಿಮ್ಮಕ್ಕ ಅವರ ಆತ್ಮಕ್ಕೆ ಶಾಂತಿ ದೊರಕಲಿ,   ಅವರ ಸಾವಿನಿಂದ ಉಂಟಾದ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ  ಕೊಡಲಿ ಎಂದು ಪ್ರಾರ್ಥನೆ ಮಾಡುವುದಾಗಿ  ಹೇಳಿದರು.

ತಿಮ್ಮಕ್ಕ ಅವರ ಅಂತ್ಯಕ್ರಿಯೆಯ ಬಗ್ಗೆ ಕುಟುಂಬದವರು ಎರಡು ಮೂರು ಸ್ಥಳಗಳನ್ನು ಗೊತ್ತು ಮಾಡಿದ್ದು,   ಅಂತ್ಯಕ್ರಿಯೆ ಎಲ್ಲಿ  ಮಾಡಬೇಕೆಂದು ಸದ್ಯದಲ್ಲಿಯೇ ನಿರ್ಧರಿಸಲಾಗುವುದು ಎಂದರು.

ತಮ್ಮ ಸಾಧನೆಗಾಗಿ ತಿಮ್ಮಕ್ಕ ಅವರಿಗೆ ಈ ಕೆಳಗಿನ ಸನ್ಮಾನಗಳು ಮತ್ತು ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗಿದೆ:

ರಾಷ್ಟ್ರೀಯ ಪೌರ ಪ್ರಶಸ್ತಿ – 1995

ಇಂದಿರಾ ಪ್ರಿಯದರ್ಶಿನಿ ವೃಕ್ಷಮಿತ್ರ ಪ್ರಶಸ್ತಿ – 1997

ವೀರಚಕ್ರ ಪ್ರಶಸ್ತಿ – 1997

ಮಹಿಳಾ ಮತ್ತು ಶಿಶು ಕಲ್ಯಾಣ ಇಲಾಖೆ, ಕರ್ನಾಟಕ ಸರ್ಕಾರ – ಇವರಿಂದ ಮಾನ್ಯತೆಯ ಪ್ರಮಾಣ ಪತ್ರ

ಭಾರತೀಯ ವೃಕ್ಷ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆ, ಬೆಂಗಳೂರು – ಇವರಿಂದ ಶ್ಲಾಘನೆಯ ಪ್ರಮಾಣ ಪತ್ರ.

ಕರ್ನಾಟಕ ಕಲ್ಪವಲ್ಲಿ ಪ್ರಶಸ್ತಿ – 2000

ಗಾಡ್‌ಫ್ರಿ ಫಿಲಿಪ್ಸ್ ಧೀರತೆ ಪ್ರಶಸ್ತಿ – 2006

ಪಂಪಾಪತಿ ಪರಿಸರ ಪ್ರಶಸ್ತಿ

ಬಾಬಾಸಾಹೇಬ್ ಅಂಬೇಡ್ಕರ್ ಪ್ರಶಸ್ತಿ

ವನಮಾತೆ ಪ್ರಶಸ್ತಿ

ಮಾಗಡಿ ವ್ಯಕ್ತಿ ಪ್ರಶಸ್ತಿ

ಶ್ರೀಮಾತಾ ಪ್ರಶಸ್ತಿ

ಎಚ್.ಹೊನ್ನಯ್ಯ ಸಮಾಜ ಸೇವಾ ಪ್ರಶಸ್ತಿ

ಕರ್ನಾಟಕ ಪರಿಸರ ಪ್ರಶಸ್ತಿ

ಮಹಿಳಾರತ್ನ ಪ್ರಶಸ್ತಿ

ನ್ಯಾಷನಲ್ ಸಿಟಿಜನ್ ಪ್ರಶಸ್ತಿ

ರಾಜ್ಯೋತ್ಸವ ಪ್ರಶಸ್ತಿ

ಹೂವಿನಹೊಳೆ ಪ್ರತಿಷ್ಠಾನ Archived 2021-05-18 ವೇಬ್ಯಾಕ್ ಮೆಷಿನ್ ನಲ್ಲಿ.ದ ವಿಶ್ವಾತ್ಮ ಪುರಸ್ಕಾರ 2015

ಆರ್ಟ್ ಆಫ್ ಲಿವಿಂಗ್ ಸಂಸ್ಥೆಯಿಂದ ವಿಶಾಲಾಕ್ಷಿ ಪ್ರಶಸ್ತಿ.

2010ರ ಸಾಲಿನ ಪ್ರತಿಷ್ಠಿತ ‘ನಾಡೋಜ’ ಪ್ರಶಸ್ತಿ ಲಭಿಸಿದೆ.

2019 ರ ಗಣರಾಜ್ಯೋತ್ಸವ ಸಂದರ್ಭದಲ್ಲಿ ಅವರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ.

2020ರಲ್ಲಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್


Share this with Friends

Related Post