Sat. Dec 28th, 2024

ದರ್ಶನ್ ಜೊತೆ ಪಾರ್ಟಿಯಲ್ಲಿ ಭಾಗಿ: ಹಾಸ್ಯ ನಟ ಚಿಕ್ಕಣ್ಣಗೆ ನೋಟಿಸ್ ಜಾರಿ

Share this with Friends

ಬೆಂಗಳೂರು,ಜೂ.17: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸ್ಯ ನಟ ಚಿಕ್ಕಣ್ಣ ಅವರಿಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.

ರೇಣುಕಾಸ್ವಾಮಿ ಹತ್ಯೆಯಾದ ದಿನ ದರ್ಶನ್ ಜೊತೆ ನಟ ಚಿಕ್ಕಣ್ಣ ಪಾರ್ಟಿಯೊಂದರಲ್ಲಿ ಭಾಗಿಯಾಗಿದ್ದರ ಹಿನ್ನೆಲೆಯಲ್ಲಿ ನೋಟಿಸ್ ಜಾರಿ ಮಾಡಿದ್ದಾರೆಂದು ತಿಳಿದು ಬಂದಿದೆ.

ಹತ್ಯೆಯಾದ ಶನಿವಾರ ಮಧ್ಯಾಹ್ನದಿಂದ ಸ್ಟೋನಿಬ್ರೂಕ್ ನಲ್ಲಿ ದರ್ಶನ್ ಮತ್ತು ಅವರ ಗ್ಯಾಂಗ್ ಜೊತೆ ಚಿಕ್ಕಣ್ಣ ಪಾರ್ಟಿಯಲ್ಲಿದ್ದರು ಸಂಜೆ ವೇಳೆಗೆ ಸ್ವಲ್ಪ ಕೆಲಸ ಇದೆ ಎಂದು ದರ್ಶನ್ ಹೊರಟು ಹೋಗಿದ್ದರು ಎಂದು ಗೊತ್ತಾಗಿದೆ.

ಈ ಹಿನ್ನೆಲೆಯಲ್ಲಿ ಇದೀಗ ಚಿಕ್ಕಣ್ಣ ಅವರಿಗೂ ಪೊಲೀಸರು ನೋಟಿಸ್ ನೀಡಿದ್ದು,ಅವರನ್ನು ಬಂಧಿಸುವುದಿಲ್ಲ,ಕೇವಲ ಸಾಕ್ಷಿಯಾಗಿ ಪರಿಗಣಿಸಲಾಗುತ್ತದೆ ಎಂದು ತಿಳಿದುಬಂದಿದೆ.


Share this with Friends

Related Post