Fri. Mar 6th, 2026

ಪಿಜಿ ವೈದ್ಯಕೀಯ: ನಾಲ್ಕನೇ ಸುತ್ತು ಆರಂಭ

Share this with Friends

ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ನಾಲ್ಕನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಇಂದಿನಿಂದ ಆರಂಭವಾಗಿದ್ದು, ಇದುವರೆಗೂ ಅರ್ಜಿ ಸಲ್ಲಿಸದೇ ಇರುವವರಿಗೆ ಮಾರ್ಚ್ 3ರೊಳಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ತಿಳಿಸಿದ್ದಾರೆ.

ಅರ್ಜಿ ಸಲ್ಲಿಸಿದವರು ಮಾರ್ಚ್ 2 ಮತ್ತು 3 ರಂದು ಕೆಇಎ ಗೆ ಬಂದು ಮೂಲ ದಾಖಲೆಗಳನ್ನು ಸಲ್ಲಿಸಬೇಕು ಎಂದೂ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

4ನೇ ಸುತ್ತಿನಲ್ಲಿ ಭಾಗವಹಿಸಲು ಇಚ್ಛಿಸುವವರು 7 ಲಕ್ಷ ರೂಪಾಯಿ ಕಾಷನ್ ಡೆಪಾಸಿಟ್ ಅನ್ನು ಮಾ.2ರಿಂದ 4ರೊಳಗೆ ಕಟ್ಟಬೇಕು. ಅಂತಹವರಿಗೆ ಮಾ.4ರಿಂದ 6ರವರೆಗೆ ಆಪ್ಷನ್ಸ್ ದಾಖಲಿಸಲು ಅವಕಾಶ ನೀಡಲಾಗುತ್ತದೆ. ಮಾ. 6ರಂದು ಸಂಜೆ ತಾತ್ಕಾಲಿಕ ಫಲಿತಾಂಶ ಹಾಗೂ ಮಾ.7ರಂದು ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ. ಸೀಟು ಹಂಚಿಕೆಯಾದವರು ಮಾ.9ರಿಂದ 11ರೊಳಗೆ ಶುಲ್ಕ ಪಾವತಿಸಿ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳಬೇಕು. ಮಾ.12ರೊಳಗೆ ಕಾಲೇಜುಗಳಿಗೆ ವರದಿ ಮಾಡಿಕೊಳ್ಳಬೇಕು ಎಂದು ಅವರು ವಿವರಿಸಿದ್ದಾರೆ.

ಇದುವರೆಗೂ ಯಾರಿಗೆ ಸೀಟು ಹಂಚಿಕೆಯಾಗಿಲ್ಲವೊ ಅಂತಹವರಿಗೆ ಮಾತ್ರ ಈ ಸುತ್ತಿನಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿದೆ. 3ನೇ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿರುವವರು ಶುಲ್ಕ ಪಾವತಿಸಿ ಮಾ.4ರೊಳಗೆ ಕಾಲೇಜುಗಳಿಗೆ ಪ್ರವೇಶ ಪಡೆಯಬೇಕು. ಒಂದು ವೇಳೆ ಪ್ರವೇಶ ಪಡೆಯದಿದ್ದರೆ ಅಂತಹವರ ಸೀಟುಗಳನ್ನು ಕೂಡ 4ನೇ ಸುತ್ತಿಗೆ ಪರಿಗಣಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

3ನೇ ಸುತ್ತಿನಲ್ಲಿ ಹಂಚಿಕೆಯಾಗದೆ ಉಳಿದಿರುವ 817 ಪಿಜಿ ವೈದ್ಯಕೀಯ ಹಾಗೂ 17 ಡಿಎನ್ ಬಿ ಸೀಟುಗಳಿಗೆ ಕೌನ್ಸೆಲಿಂಗ್ ನಡೆಯಲಿದೆ ಎಂದು ಅವರು ವಿವರಿಸಿದ್ದಾರೆ.

ಎಂ.ಫಾರ್ಮ 2ನೇ ಸುತ್ತು ಫಲಿತಾಂಶ ಪ್ರಕಟ:

ಎಂ.ಫಾರ್ಮಾ ಪ್ರವೇಶಕ್ಕೆ ಸಂಬಂಧಿಸಿದಂತೆ ಎರಡನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶ ವನ್ನು ಪ್ರಕಟಿಸಲಾಗಿದೆ. ಮಾ.3ರೊಳಗೆ ಶುಲ್ಕ ಪಾವತಿಸಿ ಕಾಲೇಜುಗಳಲ್ಲಿ ವರದಿ ಮಾಡಿಕೊಳ್ಳಲು ಸೂಚಿಸಲಾಗಿದೆ ಎಂದು ಇಸ್ಲಾವುದ್ದೀನ್ ಅವರು ತಿಳಿಸಿದ್ದಾರೆ.


Share this with Friends

Related Post