Mon. Dec 30th, 2024

ಬಿಎಸ್‌ವೈ ವಿರುದ್ಧ ಹಗೆತನದ ರಾಜಕಾರಣ: ಗುರುಪಾದ ಸ್ವಾಮಿ ಟೀಕೆ

Share this with Friends

ಮೈಸೂರು,ಜೂ.15: ರಾಜ್ಯದ ಕಾಂಗ್ರೆಸ್ ಸರ್ಕಾರ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ಹಗೆತನ ಮತ್ತು ಹೇಡಿತನದ ರಾಜಕಾರಣ ನಡೆಸುತ್ತಿದೆ ಎಂದು ಬಿಜೆಪಿ ಮುಖಂಡ ಗುರುಪಾದ ಸ್ವಾಮಿ ಟೀಕಿಸಿದ್ದಾರೆ.

ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆ ರಾಜ್ಯ ಸರ್ಕಾರ ಅಸಹ್ಯಕರ ರಾಜಕಾರಣ ಆರಂಭಿಸಿದೆ. ಪೋಕ್ಸೊ ಪ್ರಕರಣ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಚುನಾವಣೆ ಸಂದರ್ಭದಲ್ಲಿ ಬಂಧಿಸಿದರೆ ಮತಗಳು ಬರುವುದಿಲ್ಲ ಎಂಬ ಮುಂದಾಲೋಚನೆಯಲ್ಲಿ ಸುಮ್ಮನಿದ್ದು, ಈಗ ಬಂಧಿಸಲು ವಾರೆಂಟ್ ಹೊರಡಿಸಿದೆ’ ಎಂದು ದೂರಿದ್ದಾರೆ.

ಯಡಿಯೂರಪ್ಪ ಅವರ ಮೇಲೆ ಮಾರ್ಚ್‌ 4 ರಂದು ಪೋಕ್ಸೊ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ಅಂದೇ ಗೃಹ ಸಚಿವ ಜಿ.ಪರಮೇಶ್ವರ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ದೂರುದಾರ ಮಹಿಳೆ ಮಾನಸಿಕ ಅಸ್ವಸ್ಥೆ. ಆಕೆ ಹಿರಿಯ ಅಧಿಕಾರಿಗಳು ಸೇರಿದಂತೆ ಅಂದಾಜು 50 ಜನರ ಮೇಲೆ ಈಗಾಗಲೇ ಕೇಸು ದಾಖಲಿಸಿದ್ದಾಗಿ ಹೇಳಿದ್ದರು. ಆದರೆ ಈಗ ಅವರು ಆ ಬಗ್ಗೆ ಮಾತನಾಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಂತ್ರಸ್ಥೆ ಪರವಾಗಿ ದೂರು ನೀಡಿದ್ದ ಮಹಿಳೆ ಈಗಾಗಲೇ ತೀರಿಕೊಂಡಿದ್ದಾರೆ, ಆದರೂ ಯಡಿಯೂರಪ್ಪ ಅವರನ್ನು ಮಣಿಸುವ ಸಲುವಾಗಿ ಸಂಬಂಧಗಳನ್ನು ಮುಂದಿಟ್ಟು ಬಂಧಿಸುವ ಯತ್ನ ನಡೆಸಲಾಗಿದೆ, ವೈಯಕ್ತಿಕ ದ್ವೇಷಕ್ಕಾಗಿ ಯಡಿಯೂರಪ್ಪ ಅವರನ್ನು ಈಗ ಬಂಧಿಸಲು ಸರ್ಕಾರ ಮುಂದಾಗಿರುವುದು ಹೇಡಿತನ ಎಂದು ಗುರುಪಾದಸ್ವಾಮಿ ಟೀಕಿಸಿದ್ದಾರೆ.


Share this with Friends

Related Post