Mon. Dec 23rd, 2024

ಅಂಚೆ ಮತ ಪತ್ರ ವಿತರಣೆ ವ್ಯವಸ್ಥಿತವಾಗಿರಲಿ:ಕೆ.ವಿ.ರಾಜೇಂದ್ರ

Share this with Friends

ಮೈಸೂರು, ಮಾ.20: ಅಂಚೆ ಮತಪತ್ರ ವಿತರಣಾ ಕಾರ್ಯವನ್ನು ಗೊಂದಲಗಳಿಗೆ ಆಸ್ಪದ ನೀಡದೆ ನಿರ್ವಹಿಸಿ ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ ಕೆ.ವಿ.ರಾಜೇಂದ್ರ ನಿರ್ದೇಶನ ನೀಡಿದರು.

ಲೋಕಸಭಾ ಸಾರ್ವತ್ರಿಕ ಚುನಾವಣೆ ಪ್ರಯುಕ್ತ ಜಿಲ್ಲೆಯಲ್ಲಿ 85 ವರ್ಷ ಮೀರಿದವರು, ವಿಕಲಚೇತನರು ಮತ್ತು ಕೋವಿಡ್ ಪೀಡಿತರಿಗೆ ವಿತರಿಸಲಾಗುವ ಅಂಚೆಪತ್ರ ವಿತರಣಾ ಕಾರ್ಯ ವ್ಯವಸ್ಥಿತವಾಗಿರಲಿ ಎಂದು ಸಭೆಯಲ್ಲಿ ತಿಳಿಸಿದರು.

ಪ್ರತಿಯೊಬ್ಬ ಅರ್ಹರ ಮನೆಗಳಿಗೂ ಭೇಟಿ ನೀಡಿ 12 ಡಿ ಫಾರಂ ವಿತರಿಸಿ, ಒಪ್ಪಿಗೆ ಪತ್ರ ಪಡೆಯುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಮತಗಟ್ಟೆಗೆ ಹೋಗಿ ಹಕ್ಕು ಚಲಾಯಿಸಿದಾಗ ಮತದಾನ ಹಬ್ಬ ಎನಿಸಿಕೊಳ್ಳುತ್ತದೆ ಸಾಧ್ಯವಾದಷ್ಟು ಮತಕೇಂದ್ರಗಳಿಗೆ ಹೋಗಿ ಮತದಾನ ಮಾಡಲು ಜನರನ್ನು ಪ್ರೇರೇಪಿಸಬೇಕು. ಮತಕೇಂದ್ರಕ್ಕೆ ಬರಲು ಆಗದವರಿಗೆ ಅಂಚೆ ಮತಪತ್ರ ಕಡ್ಡಾಯವಾಗಿ ವಿತರಣೆ ಮಾಡಿ ಮತದಾನ ಮಾಡುವ ಕ್ರಮಗಳನ್ನು ವಿವರಿಸಿ ಎಂದು ಸಲಹೆ ನೀಡಿದರು.

ಒಮ್ಮೆ ಅಂಚೆ ಮತದಾನಕ್ಕೆ ಅರ್ಜಿ ಸಲ್ಲಿಸಿದಲ್ಲಿ ಮತಕೇಂದ್ರಕ್ಕೆ ಬಂದು ಮತದಾನ ಮಾಡಲು ಚುನಾವಣಾ ಅಯೋಗವು ಅವಕಾಶ ಕಲ್ಪಿಸುವುದಿಲ್ಲ,ಈ ವಿಷಯವನ್ನು ಮತದಾರರಿಗೆ ಮನವರಿಕೆ ಮಾಡಿಕೊಡಬೇಕು ಎಂದು ತಿಳಿಸಿದರು

12 ಡಿ ಫಾರಂ ಚುನಾವಣಾ ವೆಬ್ ಸೈಟ್ ನಲ್ಲಿ ಆನ್ ಲೈನ್ ಲಭ್ಯವಿದ್ದು ಅಲ್ಲಿಯೂ ಕೂಡ ಫಾರಂ ಡೋನ್ ಲೋಡ್ ಮಾಡಿಕೊಳ್ಳಬಹುದು ಎಂದು ಅವರು ತಿಳಿಸಿದರು.

ವಿತರಿಸಲಾದ ಅಂಚೆ ಮತಪತ್ರ ಫಾರಂ ಗಳನ್ನು ಮಾರ್ಚ್ 25 ರೊಳಗಾಗಿ ಮತಗಟ್ಟೆ ಅಧಿಕಾರಿಗಳಿಗೆ ಸಲ್ಲಿಸಬೇಕು ನಂತರ ಬಂದ ಫಾರಂ ಗಳನ್ನು ಪರಿಗಣಿಸುವುದಿಲ್ಲ ಎಂದು ಡಾ.ರಾಜೇಂದ್ರ ಹೇಳಿದರು.

ಸಭೆಯಲ್ಲಿ ಸಹಾಯಕ ಚುನಾವಣಾಧಿಕಾರಿಗಳು, ಸೆಕ್ಟರ್ ಅಧಿಕಾರಿಗಳು ಹಾಗೂ ಅಂಚೆ ಮತಪತ್ರ ವಿತರಣೆಗೆ ನಿಯೋಜಿಸಲಾಗಿರುವ ವಿವಿಧ ನೋಡೆಲ್ ಅಧಿಕಾರಿಗಳು ಪಾಲ್ಗೊಂಡಿದ್ದರು.


Share this with Friends

Related Post