ಬೆಂಗಳೂರು,ಜೂ.6: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬೆಂಗಳೂರು ಸ್ಥಳೀಯ ನ್ಯಾಯಾಲಯ ಜೂನ್ 10ರವರೆಗೆ ಎಸ್‌ಐಟಿ ಕಸ್ಟಡಿಗೆ ಒಪ್ಪಿಸಿದೆ.
ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಮಾಜಿ ಸಂಸದ ಹಾಗೂ ಮೂವರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಪ್ರಜ್ವಲ್ ರೇವಣ್ಣ ಅವರನ್ನು ಗುರುವಾರ ಮಧ್ಯರಾತ್ರಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಕೆಲವೇ ನಿಮಿಷಗಳಲ್ಲಿ ಬಂಧಿಸಲಾಗಿತ್ತು.
ಮ್ಯೂನಿಚ್‌ನಿಂದ ಆಗಮಿಸಿದ ಪ್ರಜ್ವಲ್ ರನ್ನು ವಿಚಾರಣೆಗಾಗಿ ತ್ವರಿತವಾಗಿ ಸಿಐಡಿ ಕಚೇರಿಗೆ ಕರೆದೊಯ್ಯಲಾಗಿತ್ತು.
ಆದರೆ ಪ್ರಜ್ವಲ್ ಎಸ್ಐಟಿ ಅಧಿಕಾರಿಗಳ ಯಾವುದೇ ಪ್ರಶ್ನೆಗಳಿಗೂ ಉತ್ತರ ಕೊಟ್ಟಿಲ್ಲ,ಹಾಗಾಗಿ ಮತ್ತಷ್ಟು ವಿಚಾರಣೆಗಾಗಿ ತಮ್ಮ ಕಸ್ಟಡಿಗೆ ನೀಡಬೇಕೆಂದು ಎಸ್ಐಟಿ ನ್ಯಾಯಾಲಯಕ್ಕೆ ಮನವಿ ಮಾಡಿತು.
ಅದನ್ನು ಒಪ್ಪಿ ನ್ಯಾಯಾಲಯ ಪ್ರಜ್ವಲ್ ರೇವಣ್ಣನನ್ನು ಜೂ.10 ರ ತನಕ ಎಸ್ಐಟಿ ಕಸ್ಟಡಿ ಒಪ್ಪಿಸಿದೆ.