Tue. Apr 15th, 2025

ನಿರೀಕ್ಷಣ ಜಾಮೀನಿಗೆ ಪ್ರಜ್ವಲ್ ರೇವಣ್ಣ ಅರ್ಜಿ

Share this with Friends

ಬೆಂಗಳೂರು,ಮೇ.29: ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.

ಪ್ರಜ್ವಲ್ ಪರ ವಕೀಲ ಅರುಣ್ ಅವರು ಬುಧವಾರ ಮಧ್ಯಾಹ್ನ ಜನಪ್ರತಿನಿಧಿಗಳ ಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದಾರೆ.

ಎಫ್‍ಐಆರ್ ದಾಖಲಾದ ತಿಂಗಳ ಬಳಿಕ ಪ್ರಜ್ವಲ್ ರೇವಣ್ಣ ಸಿಐಡಿ ಕ್ರೈಂ ನಂ 20ರಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ಮೂರು ಅತ್ಯಾಚಾರ ಪ್ರಕರಣಕ್ಕೂ ಅರ್ಜಿ ಸಲ್ಲಿಕೆ ಮಾಡಿದ್ದು, ಪ್ರಜ್ವಲ್ ಪರ ವಕೀಲರು ಮಧ್ಯಂತರ ನಿರೀಕ್ಷಣಾ ಜಾಮೀನಿಗೆ ಕೋರ್ಟ್ ಮುಂದೆ ಮನವಿ ಮಾಡಿದರು. ಈ ಮನವಿ ತಿರಸ್ಕರಿಸಿದ ಕೋರ್ಟ್, ಮೇ 31ಕ್ಕೆ ವಿಚಾರಣೆ ನಿಗದಿ ಮಾಡಿದೆ.

ಸೋಮವಾರ ವೀಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದ ಪ್ರಜ್ವಲ್ ರೇವಣ್ಣ, ಕುಟುಂಬ ಹಾಗೂ ರಾಜ್ಯದ ಜನತೆಯ ಮುಂದೆ ಕ್ಷಮೆಯಾಚಿಸಿದ್ದರು ಜತೆಗೆ ಶುಕ್ರವಾರ ಎಸ್‍ಐಟಿ ಮುಂದೆ ಹಾಜರಾಗುವುದಾಗಿ ತಿಳಿಸಿದ್ದಾರೆ.

ಅದಕ್ಕೂ ಮುನ್ನವೇ ಅವರು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.


Share this with Friends

Related Post